ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ನಡೆದು ಮೂರು ದಿನಗಳು ಕಳೆದಿವೆ. ನಿನ್ನೆ ಸಂಜೆ ಮೈಸೂರಿನ ಎಪಿಎಂಸಿ ಮೈದಾನದಲ್ಲಿ ನಡೆದ ರ್ಯಾಲಿ ಉದ್ದೇಶಿಸಿ ಅವರು ಮಾತನಾಡಿದರು.
ಈ ಸಮಯದಲ್ಲಿ ಭಾರಿ ಮಳೆ ಸುರಿಯಲು ಪ್ರಾರಂಭಿಸಿತು. ಆದಾಗ್ಯೂ, ಮಳೆ ನಡುವೆ ರಾಹುಲ್ ಗಾಂಧಿ ತಮ್ಮ ಭಾಷಣವನ್ನು ಮುಂದುವರಿಸಿದರು. ಈ ವೇಳೆಯಲ್ಲಿ ಅವರು ಅವರು ಬಿಜೆಪಿ ಮತ್ತು ಆರ್ ಎಸ್ ಎಸ್ ಅನ್ನು ತೀವ್ರವಾಗಿ ಗುರಿಯಾಗಿಸಿಕೊಂಡು ಮಾತನಾಡಿದರು.
ವೀಡಿಯೊದಲ್ಲಿ, ರಾಹುಲ್ ಗಾಂಧಿ ಮಳೆಯ ನಡುವೆ ರ್ಯಾಲಿಯನ್ನುದ್ದೇಶಿಸಿ ಮಾತನಾಡುವುದನ್ನು ಕಾಣಬಹುದು.
भारत को एकजुट करने से,
हमें कोई नहीं रोक सकता।भारत की आवाज़ उठाने से,
हमें कोई नहीं रोक सकता।कन्याकुमारी से कश्मीर तक जाएगी, भारत जोड़ो यात्रा को कोई नहीं रोक सकता। pic.twitter.com/sj80bLsHbF
— Rahul Gandhi (@RahulGandhi) October 2, 2022
ಅದರಲ್ಲಿ ಅವರು ಭಾರತ್ ಜೋಡೋ ಯಾತ್ರೆಯು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನದಿಯಂತಹ ಪ್ರಯಾಣ ಸಾಗಲಿದೆ. ಈ ನದಿಯಲ್ಲಿ ಹಿಂಸೆ, ದ್ವೇಷವನ್ನು ನೀವು ನೋಡುವುದಿಲ್ಲ. ಪ್ರೀತಿ ಮತ್ತು ಭ್ರಾತೃತ್ವವನ್ನು ಮಾತ್ರ ಕಾಣಬಹುದು. ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ನಿಲ್ಲುವುದು ಈ ಯಾತ್ರೆಯ ಉದ್ದೇಶವಾಗಿದೆ ಅಂತ ಹೇಳಿದರು.
ಇದೇ ವೇಳೆ ಅವರು, ಭಾರತವನ್ನು ಒಗ್ಗೂಡಿಸುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಭಾರತದ ದನಿ ಎತ್ತುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ ಜೋಡೋ ಯಾತ್ರೆಯನ್ನು ತಡೆಯಲು ಸಾಧ್ಯವಿಲ್ಲ ಅಂತ ಹೇಳಿದರು.