ಚಾಮರಾಜನಗರ : ದೇಶಾದ್ಯಂತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರ ಮಾಡಿಕೊಂಡಿದ್ದಾರೆ.
ರಾಹುಲ್ ಗಾಂಧಿ ಅವರನ್ನು ಬಂಡೀಪುರದ ಬಳಿ ಸಿದ್ದರಾಮಯ್ಯ ಅವರು ಬರ ಮಾಡಿಕೊಂಡರು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ವಿಧಾನ ಪರಿಷತ್ ನ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್ ಹಾಜರಿದ್ದರು.