spot_img
spot_img
spot_img
18.2 C
Belagavi
Monday, September 26, 2022
spot_img

ವಿದ್ಯಾರ್ಥಿ ಜೀವನದಲ್ಲಿ ಕಾಲೇಜು ಶಿಕ್ಷಣ ಅತ್ಯಂತ ಮಹತ್ವದ ಹಂತವಾಗಿದೆ: ರಾಹುಲ ಜಾರಕಿಹೊಳಿ

spot_img
spot_img

For Breaking News Download App

ಬೆಳಗಾವಿ:  “ವಿದ್ಯಾರ್ಥಿ ಜೀವನದಲ್ಲಿ ಕಾಲೇಜು ಶಿಕ್ಷಣ ಅತ್ಯಂತ ಮಹತ್ವದ ಹಂತವಾಗಿದೆ. ಶಿಕ್ಷಣದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ವಹಿಸಿ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈಯುವಂತಾಗಬೇಕು” ಎಂದು ಕೆ. ಪಿ. ಸಿ. ಸಿ. ಕಾರ್ಯಾಧ್ಯಕ್ಷರು ಹಾಗೂ ಶಾಸಕರಾದ ಸತೀಶ ಜಾರಕಿಹೊಳಿಯವರ ಪುತ್ರ, ಯುವ ನಾಯಕ ರಾಹುಲ ಜಾರಕಿಹೊಳಿ ಕರೆ ನೀಡಿದರು.

ನಂದಿಕುರಳಿಯ ಎಸ್.ಎಸ್. ಸಂಸ್ಥೆಯ ಕಾಕತಿ ಬೆಳಗಾವಿ ಕಲ್ಪವೃಕ್ಷ ಪದವಿಪೂರ್ವ ಕಾಲೇಜಿನಲ್ಲಿ ಬೆಳಗಾವಿ ರಾಜ್ಯಮಟ್ಟದ ಮುಕ್ತ ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಅವರು, “ಕಳೆದ ಎರಡು ವರ್ಷಗಳಿಂದ ಕೋವಿಡ್-19 ಕಾರಣದಿಂದ ಕ್ರೀಡೆಯಿಂದ ದೂರವಿದ್ದ ಯುವ ಪೀಳಿಗೆಗೆ ಸರಿಯಾದ ತರಬೇತಿ ಮತ್ತು ಮಾರ್ಗದರ್ಶನ ನೀಡುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲೂ ನಮ್ಮ ಭಾಗದ ಕ್ರೀಡಾಪಟುಗಳು ಮಿಂಚುವಂತಾಗಬೇಕು. ಆ ನಿಟ್ಟಿನಲ್ಲಿ ಪ್ರೋತ್ಸಾಹಿಸಲು ನಮ್ಮ ಸತೀಶ ಜಾರಕಿಹೊಳಿ ಫೌಂಡೇಶನ್ ಸದಾ ಸಿದ್ಧವಿದೆ” ಎಂದರು.

ರಾಜ್ಯಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೆಂಗಳೂರಿನ ನ್ಯಾಕ್ ಸಂಯೋಜನಾ ಅಧಿಕಾರಿಯಾದ ಧರಿಖಾನ್ ಕಾಂಬಳೆ ಅವರು,ಮಾತನಾಡಿ,” ಕಾಲೇಜುಗಳು ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಪೂರಕವಾಗಿರುವ ಸೌಕರ್ಯಗಳನ್ನು ಒದಗಿಸುವ ಮೂಲಕ ಅವರ ಭವಿಷ್ಯಕ್ಕೆ ಅಡಿಪಾಯ ಹಾಕಬೇಕು. ಆರೋಗ್ಯಯುತ ದೇಹ ಮತ್ತು ಮನಸ್ಸನ್ನು ಸದೃಢಗೊಳಿಸುವಲ್ಲಿ ಕ್ರೀಡೆಗಳ ಪಾತ್ರವು ಪ್ರಮುಖಗಿದೆ. ಅದರೊಂದಿಗೆ ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತಮಟ್ಟದ ಸರ್ಕಾರಿ ಹುದ್ದೆ ಪಡೆಯಲು ಸಮಗ್ರ ಅಧ್ಯಯನ ಕೈಗೊಳ್ಳಬೇಕು” ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಸಿದ್ದು ಸುಣಗಾರ ಗ್ರಾಮ ಪಂಚಾಯತ ಅಧ್ಯಕ್ಷ ಸುನಿಲ ಸುಣಗಾರ, ಜಿಲ್ಲಾ ಪಂಚಾಯತ ರಾಮಣ್ಣ ಗುಳ್ಳಿ, ಸಂಸ್ಥೆಯ ಕಾರ್ಯಾಧ್ಯಕ್ಷ
ನಾನಾ ಸಾಹೇಬ, ಜಾಧವ,ಕಾಲೇಜಿನ ಪ್ರಾಚಾರ್ಯ ಎಸ್.ಪಿ. ನಂದನವಾಡ, ಎಸ್. ಎಸ್. ಮೂಕನವರ ಹಾಗೂ ತಾಲ್ಲೂಕು ಪಂಚಾಯ್ತಿ ಸದಸ್ಯರು ಯಲ್ಲಪ್ಪ ಕೋಳೇಕರ ಈರಪ್ಪ ಬಂಜಿರಾಮ್ ಶೆಟ್ಟೆಪ್ಪ ಜುಂಟ ಅಶೋಕ್ ಪಾಟೇಲ ಲಗಮನ್ನಾ ಸನದಿ ಡಾ. ನಾರಾಯಣ ನಾಯಕ್ ಮಾರುತಿ ಗೌಡ ಹಿತಾರಗೌಡ ಪಕ್ಕೀರಗೌಡ ಗಡ್ಡಿಗೌಡರ್ ಮತ್ತು ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪಾಲಕರು ಪಾಲ್ಗೊಂಡಿದ್ದರು.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -