spot_img
spot_img
spot_img
18.5 C
Belagavi
Thursday, September 29, 2022
spot_img

ತರಬೇತಿಯು ಸಿಬ್ಬಂದಿಗಳ ನೈಪುಣ್ಯತೆ, ಕರ್ತವ್ಯ ಪ್ರಜ್ನೆ ಹೆಚ್ಚಿಸಲು ಸಹಾಯಕ : ರಾಜೇಶ ಹುದ್ದಾರ

spot_img

ಬೆಳಗಾವಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ಸಂಚಾರ ಇಲಾಖೆಯ ಸಹಯೋಗದೊಂದಿಗೆ ಸಿಬ್ಬಂದಿಗೆ ವಿವಿಧ ವಿಷಯಗಳ ಕುರಿತು ವಿಶೇಷ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

ಒಟ್ಟು 6 ತಂಡಗಳಲ್ಲಿ ಸಂಸ್ಥೆಯ ವ್ಯಾಪ್ತಿಯ ವಿವಿಧ ವಿಭಾಗಗಳ ಸಂಚಾರ ನಿಯಂತ್ರಕರುಗಳಿಗೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ತರಬೇತಿ ಕಾರ್ಯಕ್ರಮದಲ್ಲಿ ಅನುಸೂಚಿ ಮಾರ್ಗಗಳ ರಚನೆ, ಪರಿಣಾಮಕಾರಿ ಬಸ್ ನಿಲ್ದಾಣಗಳ ನಿರ್ವಹಣೆ, ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತಹ ಮಾಹಿತಿಗಳು, ವಿದ್ಯಾರ್ಥಿಗಳ ಹಾಗೂ ಸಂಸ್ಥೆಯಲ್ಲಿ ಚಾಲ್ತಿಯಲ್ಲಿರುವ ಎಲ್ಲ ಮಾದರಿಯ ರಿಯಾಯತಿ ಪಾಸುಗಳು, ನಮ್ಮ ಕಾರ್ಗೋ, ಮತ್ತು ವಾಣಿಜ್ಯ ಮಳಿಗೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ, ಅಪಘಾತ ತಡೆಗಟ್ಟುವಿಕೆ ಮತ್ತು ನಿರ್ವಹಣೆ ಕುರಿತು ತರಬೇತಿ ನೀಡಲಾಯಿತು. ಪ್ರಯಾಣಿಕರಿಗೆ ಅನುಕೂಲವಾಗುವಂತೆ ಜನಸ್ನೇಹಿ ಸಾರಿಗೆ ನೀಡುವ ಪ್ರಸ್ತುತ ಸಂಸ್ಥೆಯಲ್ಲಿ ಚಾಲ್ತಿಯಲ್ಲಿರುವ ಸುತ್ತೋಲೆಗಳು, ಇತ್ಯಾದಿ ಸಂಚಾರ ನಿಯಂತ್ರಕರುಗಳ ಕರ್ತವ್ಯ ಮತ್ತು ಜವಾಬ್ದಾರಿಯ ಕುರಿತು ತರಬೇತಿ ನೀಡಲಾಯಿತು.

ಮುಖ್ಯ ಸಂಚಾರ ವ್ಯವಸ್ಥಾಪಕ ರಾಜೇಶ ಹುದ್ದಾರ ಮಾತನಾಡಿ, ಈ ತರಬೇತಿ ಕಾರ್ಯಕ್ರಮವು ಸಿಬ್ಬಂದಿಗಳ ನೈಪುಣ್ಯತೆ ಹಾಗೂ ಕಾರ್ಯಕ್ಷಮತೆ, ಕರ್ತವ್ಯ ಪ್ರಜ್ನೆಯನ್ನು ಹೆಚ್ಚಿಸಲು ಸಹಾಯವಾಗುತ್ತದೆ, ಮತ್ತು ಸಾರ್ವಜನಿಕ ಪ್ರಯಾಣಿಕರ ಹಿತದೃಷ್ಟಿಯಿಂದ ಅತೀ ಉಪಯುಕ್ತವಾಗಿದೆಯೆಂದು ಹೇಳಿದರು.

ತರಬೇತಿ ಕೇಂದ್ರದ ಪ್ರಾಚಾರ್ಯ ನಾರಾಯಣಪ್ಪ ಕುರುಬರ ಮಾತನಾಡಿ, ಇಂತಹ ತರಬೇತಿ ಕಾರ್ಯಕ್ರಮಗಳು ಸಿಬ್ಬಂದಿಗಳ ವೃತ್ತಿ ಕೌಶಲ್ಯವನ್ನು ಹೆಚ್ಚಿಸುವದರೊಂದಿಗೆ ಸಾರ್ವಜನಿಕರಿಗೆ ಸಂಸ್ಥೆಯ ಕುರಿತು ಮಾಹಿತಿಗಳು ಸಕಾಲದಲ್ಲಿ ತಲುಪಲು ಸಹಕಾರಿಯಾಗುತ್ತದೆ. ಇಂತಹ ತರಬೇತಿಗಳಿಗೆ ನಿಯೋಜಿಸಿದ ಸಿಬ್ಬಂದಿ ತಪ್ಪದೆ ಹಾಜರಾಗಿ ವೃತ್ತಿ ನೈಪುಣ್ಯತೆ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ ಡಿ,ಕೋಟ್ರೆಪ್ಪ, ವಿಭಾಗೀಯ ಸಾರಿಗೆ ಅಧಿಕಾರಿಗಳಾದ ಕೆ.ಎಲ್.ಗುಡೆನ್ನವರ, ಎಸ್.ಎಸ್.ಮುಜುಮದಾರ ಸಿಬ್ಬಂದಿಗೆ ತರಬೇತಿ ನೀಡಿದರು. ಕೇಂದ್ರದ ಮೇಲ್ವಿಚಾರಕ ಸಿಬ್ಬಂದಿ ಮತ್ತು ಪ್ರಾದೇಶಿಕ ತರಬೇತಿ ಕೇಂದ್ರದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -