spot_img
spot_img
spot_img
28.1 C
Belagavi
Thursday, September 29, 2022
spot_img

ಬಿಜೆಪಿಯಿಂದ ಜಿಗಿದು ಕಸಬರಗಿ ಹಿಡಿದ ರಾಜು ಟೋಪಣ್ಣವರ

spot_img

ಬೆಳಗಾವಿ : ವಿಧಾನಸಭೆ ಚುನಾವಣೆ ಮುಂಚಿತವಾಗಿಯೇ ಬೆಳಗಾವಿ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಕೆಜೆಪಿಯಿಂದ ರಾಜಕೀಯ ಎಂಟ್ರಿಕೊಟ್ಟು ಬಳಿಕ ಬಿಜೆಪಿ ಸೇರಿಕೊಂಡು,ಬೆಳಗಾವಿಯ ರಾಜೀವ ಟೋಪಣ್ಣವರ,ಅವರು ಇಂದು ಆಮ್ ಆದ್ಮಿ ಪಾರ್ಟಿ ಸೇರಿಕೊಂಡಿದ್ದಾರೆ.

ಇಂದು ಬೆಂಗಳೂರಿನ ಆಮ್ ಆದ್ಮಿ ಕಚೇರಿಯಲ್ಲಿ, ಪಕ್ಷದ ಮುಖಂಡರ ಸಮ್ಮುಖದಲ್ಲಿ ರಾಜೀವ ಟೋಪಣ್ಣವರ ಅಧಿಕೃತವಾಗಿ ಆಮ್ ಆದ್ಮಿ ಪಾರ್ಟಿ ಸೇರಿಕೊಂಡಿದ್ದಾರೆ. ಜಿಲ್ಲೆಯಲ್ಲಿ ರಾಜು ಟೋಪಣ್ಣವರ ಅವರ ಪಕ್ಷಾಂತರ ಪರ್ವಕ್ಕೆ ಚಾಲನೆ ನೀಡಿದಂತಾಗಿದೆ.

ನಾನು ಪ್ರಧಾನಿ ಮೋದಿ ಅವರ ದೊಡ್ಡ ಅಭಿಮಾನಿ ಆಗಿದ್ದೆ ಆದ್ರೆ ಅವರು ಒಳ್ಳೆಯ ಯೋಜನೆಗಳನ್ನು ಸ್ಥಳೀಯ ನಾಯಕರು ಯೋಜನೆಗಳನ್ನು ಸರಿಯಾಗಿ ಅನುಷ್ಠಾನ ಮಾಡುತ್ತಿಲ್ಲ, ಹೀಗಾಗಿ ಕೇಜ್ರಿವಾಲ್ ಅವರು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದು ಅವರ ಜನಪರ ಕಾಳಜಿಯನ್ನು ಮೆಚ್ಚಿ ಆಮ್ ಆದ್ಮಿ ಪಾರ್ಟಿ ಸೇರುತ್ತಿದ್ದು ಪಕ್ಷದ ಸಂಘಟನೆಗೆ ಪ್ರಾಮಾಣಿಕವಾಗಿ ಶ್ರಮಿಸುವದಾಗಿ ಭರವಸೆ ನೀಡಿದ್ರು.ರಾಜೀವ ಟೋಪಣ್ಣವರ ಅವರಿಗೆ ಆಮ್ ಆದ್ಮಿ ಪಾರ್ಟಿ ಉತ್ತರ ಕರ್ನಾಟಕ ಪ್ರದೇಶದ ಸಂಘಟನೆಯ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿದು ಬಂದಿದೆ.

spot_img

Related News

ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂ.ಗಳ ಪರಿಹಾರ : ಸಿಎಂ ಬೊಮ್ಮಾಯಿ 

ಹಾವೇರಿ : ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂಪಾಯಿಗಳ ಪರಿಹಾರ ಒದಗಿಸಲಾಗುವುದು ಹಾಗೂ ಗಂಟು ರೋಗದ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು ಹಾವೇರಿಯ ಗುರುಭವನದಲ್ಲಿ ಹಾವೇರಿ...

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -