ರಾಜ್ಯಸಭಾ ಸಂಸದರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಮ ಈರಣ್ಣ ಕಡಾಡಿ ಅವರು “ನನ್ನ ಮಣ್ಣು ನನ್ನ ದೇಶ” ಅಭಿಯಾನದ ಅಂಗವಾಗಿ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿರುವ “ಅಮೃತ ಕಳಸ ಯಾತ್ರೆ”ಯನ್ನು ಬೆಳಗಾವಿಯ ರೈಲ್ವೆ ನಿಲ್ದಾಣದಲ್ಲಿ ಸ್ವಾಗತಿಸಿ, “ಅಮೃತ ಕಳಸ ಯಾತ್ರೆ”ಯ ವಿಶೇಷ ರೈಲುಗೆ ಹಸಿರು ನಿಶಾನೆ ತೋರಿಸುವ ಮೂಲಕ ಬೆಳಗಾವಿ ಜಿಲ್ಲೆಯಿಂದ ಸಂಗ್ರಹಿಸಿದ ಮಣ್ಣನ್ನು ಹಾಗೂ ಕಾರ್ಯಕರ್ತರನ್ನು ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ ಬೆಳಗಾವಿ ದಕ್ಷಿಣ ಶಾಸಕರಾದ ಶ್ರೀ ಅಭಯ ಪಾಟೀಲ, ಮೇಯರ್ ಶ್ರೀಮತಿ ಶೋಭಾ ಸೋಮನಾಚೆ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಶ್ರೀ ರಾಜೇಶ್ ನೇರ್ಲಿ, ಬೆಳಗಾವಿ ಗ್ರಾಮೀಣ ಪ್ರಧಾನ ಕಾರ್ಯದರ್ಶಿ ಶ್ರೀ ಸುಭಾಸ ಪಾಟೀಲ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.