ದಕ್ಷಿಣ ಕನ್ನಡ : ಜಿಲ್ಲಾ ಎಸ್ಪಿ ಕಚೇರಿಗೆ ಹೋಗುತ್ತಿದ್ದ ಎಎಸ್ಐ ಕುಸಿದು ಬಿದ್ದು ಸಾವನ್ನಪ್ಪಿದ ಆಘಾತಕಾರಿ ಘಟನೆ ನಡೆದಿದೆ. ದಕ್ಷಿಣ ಕನ್ನಡದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಬೆರಳುಮುದ್ರೆ ಘಟಕದಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ
ತಿಪ್ಪಣ ನಾಗವ್ವ ಮಾದರ (37) ಮೃತಪಟ್ಟ ದುರ್ದೈವಿ. ಇವರು ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗದವರು, 2011ರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಇಲಾಖೆಗೆ ಸೇರಿದ್ದರು. ಇವರು ಆರು ತಿಂಗಳ ಹಿಂದೆ ಮುಂಬಡ್ತಿ ಆಗಿ ದಕ್ಷಿಣ ಕನ್ನಡ ಜಿಲ್ಲಾ ಬೆರಳು ಮುದ್ರೆ ಘಟಕದಲ್ಲಿ ಎಎಸ್ಐ ಆಗಿ ಕೆಲಸ ಮಾಡುತ್ತಿದ್ದರು.
ದಿನ ನಿತ್ಯದಂತೆ ಎಸ್ಪಿ ಕಚೇರಿಗೆ ಶೆಟ್ಟಿ ಸರ್ಕಲ್ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದಾಗ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಎಂ.ವಿ ಶೆಟ್ಟಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿಲಾಗಿದೆ.ಹೆಚ್ಚುವರಿ ಚಿಕತ್ಸೆಗಾಗಿ ಕೆಎಂಸಿ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮೃತಪಟ್ಟಿದ್ದಾರೆ.