ಬೆಳಗಾವಿ : ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿ ಮೃತದೇಹ ಪತ್ತೆಯಾದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹೊಸೂರ ಗ್ರಾಮದಲ್ಲಿ ನಡೆದಿದೆ.
ಹೊಸೂರ ಗ್ರಾಮದ ಪಾಂಡಪ್ಪ ದುಂಡಪ್ಪ ಜಟಕನ್ನವರ (35)ವರ್ಷದ ಮೃತದೇಹ ಪತ್ತೆಯಾಗಿದೆ. ಮಾರಕಾಸ್ತ್ರಗಳಿಂದ ಕೊಲೆ ಮಾಡಿ ಅಪಘಾತ ಎಂಬ ರೀತಿ ಬಿಂಬಿಸಲು ಯತ್ನಿಸಿದ ಶಂಕೆ ವ್ಯಕ್ತವಾಗಿದೆ.ಹೊಸೂರ ಫೂಲ್ ಬಳಿ ಶವ ಬಿಸಾಕಿ ಹೋಗಿರುವ ದುಷ್ಕರ್ಮಿಗಳು ಪತ್ತೆಗೆ ಪೋಲೀಸರು ಬಲೆ ಬೀಸಿದ್ದಾರೆ.
ಕಟಕೋಳ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು,ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರಾಮದುರ್ಗ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ