spot_img
22.9 C
Belagavi
Sunday, December 4, 2022
spot_img

ರಮೇಶ್ ಜಾರಕಿಹೊಳಿಗೆ ಸರ್ಕಾರ ಉರುಳಿಸುವ ಶಕ್ತಿ ಇದೆ : ಸತೀಶ್ ಜಾರಕಿಹೊಳಿ 

ಬೆಳಗಾವಿ: ರಮೇಶ್ ಜಾರಕಿಹೊಳಿಗೆ ಸರ್ಕಾರ ಉರುಳಿಸುವ ಶಕ್ತಿ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಗೋಕಾಕ್ ನಗರದಲ್ಲಿ ನಡೆದ ಉಪ್ಪಾರ ಸಮಾಜದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಅವರು ಇನ್ನೊಮ್ಮೆ ಸರ್ಕಾರ ಉರಳಿಸುವ ಪ್ರಯತ್ನ ಮಾಡಲಿ ಎಂದು ನಾವೆಲ್ಲ ಪ್ರಾರ್ಥಿಸೋಣ.

ಜಾರಕಿಹೊಳಿ ಸಹೋದರಿಗೆ ಸರ್ಕಾರ ಉರಳಿಸುವ ಶಕ್ತಿ ಇದೆ ಎಂದು ಹೇಳ್ತಾರೆ. ರಾಜಕಾರಣದಲ್ಲಿ ನಾಲ್ವರು ಸಹೋದರರಿದ್ದೇವೆ. ನಾಲ್ವರು ಒಂದೇ ಎಂದು ಭಾವಿಸಬಾರದು ಎಂದರು.

ನಾಲ್ವರು ಸಹೋದರರ ಕೆಲಸವೂ ಬೇರೆ ಬೇರೆ ಇದೆ, ಯಾರೂ ಗೊಂದಲ ಮಾಡಿಕೊಳ್ಳಬಾರದು. ಉಳಿದ ನಾಲ್ವರು ಸಹೋದರರು ಸರ್ಕಾರ ಉರಳಿಸುವುದರ ಭಾಗವಾಗುವುದಿಲ್ಲ. ರಮೇಶ್ ಜಾರಕಿಹೊಳಿಗೆ ಮಾತ್ರ ಸರ್ಕಾರ ಉರಳಿಸುವ ಶಕ್ತಿ ಇದೆ. ಅವರು ಇನ್ನೊಮ್ಮೆ ಸರ್ಕಾರ ಉರಳಿಸುವ ಪ್ರಯತ್ನವನ್ನ ಮಾಡಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ ಎಂದರು.

Related News

50 ಲಕ್ಷ ರೂ,ಗಳ ವೆಚ್ಚದಲ್ಲಿ ಮಂಡೋಳಿ ಗ್ರಾಮದ ರಸ್ತೆಗಳ ಅಭಿವೃದ್ಧಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ...

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಯೋಜನೆಗಳ ಸರಣಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಕಾಂಕ್ರೀಟ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -