spot_img
spot_img
spot_img
21.1 C
Belagavi
Friday, September 30, 2022
spot_img

ರಮೇಶ್ ಜಾರಕಿಹೊಳಿ ಆಪ್ತನ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ 

spot_img

ಬೆಳಗಾವಿ : ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ಆಪ್ತನ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಚ್ಛೆಯ ನೆಹರು ನಗರದಲ್ಲಿ ಬೆಳಕಿಗೆ ಬಂದಿದೆ.

28 ವರ್ಷದ ಸಾವಿಯೋ ಪಿಳೈ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆತ್ಮಹತ್ಯೆಗೂ ಮುನ್ನ ಡೆತ್‌ ನೋಟ್ ಬರೆದಿಟ್ಟಿದ್ದು, ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಡೆತ್‌ ನೋಟ್‌ನಲ್ಲಿ ಪ್ರಸ್ತಾಪಿಸಲಾಗಿದೆ.

ಕ್ಯಾಂಪ್ ಠಾಣಾ ವ್ಯಾಪ್ತಿಯ ಮಹಿಳೆಯೋರ್ವಳ ಜೊತೆ ಸಾವಿಯೋ ಅಕ್ರಮ ಸಂಬಂಧ ಹೊಂದಿದ್ದ. ಆದ್ರೆ, ಇಬ್ಬರ ಮಧ್ಯೆ ಮನಸ್ತಾಪವಾಗಿ ಪ್ರಕರಣ ಠಾಣೆ ಮೆಟ್ಟಿಲೇರಿತ್ತು. ಈ ವೇಳೆ ಬಿಜೆಪಿ ಮುಖಂಡ ಪೃಥ್ವಿ ಸಿಂಗ್, 1.50 ಲಕ್ಷ ಹಣ ಪಡೆದಿದ್ದಾರೆ ಎನ್ನಲಾಗಿದೆ. ಪೃಥ್ವಿ ಸಿಂಗ್ ರಮೇಶ ಜಾರಕಿಹೊಳಿ ಆಪ್ತ, ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದಾರೆ.

1.50 ಲಕ್ಷ ಹಣ ಪಡೆದಿದ್ದಲ್ಲೇ ಇನ್ನು ಹೆಚ್ಚಿನ ಹಣ ನೀಡುವಂತೆ ಕಿರುಕುಳ ನೀಡಿದ್ದಾರೆ ಎಂದು ಡೆತ್‌ನೋಟ್ ಬರೆದಿಟ್ಟು ಸಾವಿಯೋ ನೇಣು ಬಿಗಿದುಕೊಂಡು ಪಿಳೈ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

spot_img

Related News

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

ಕೊಲೆಯಾದ ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ನೌಕರಿ 

ಬೆಂಗಳೂರು : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -