spot_img
spot_img
spot_img
18 C
Belagavi
Thursday, September 29, 2022
spot_img

ಹಿಜಾಬ್ ಹಾಗೂ ಕೇಸರಿ ಶಾಲು ಧರಿಸದಂತೆ ರಮೇಶ್ ಜಾರಕಿಹೊಳಿ ಮನವಿ

spot_img

ಗೋಕಾಕ : ನ್ಯಾಯಾಲಯದ ಆದೇಶ ಪಾಲನೆ ಮಾಡುವದು ನಮ್ಮೆಲ್ಲರ ಆದ್ಯ ಕರ್ತವ್ಯ. ಮಕ್ಕಳಿಗೆ ಶಾಲೆ, ಕಾಲೇಜು ಆವರಣಗಳಲ್ಲಿ ಹಿಜಾಬ್ ಹಾಗೂ ಕೇಸರಿ ಧರಿಸದಂತೆ ಕ್ಷೇತ್ರದ ಜನತೆಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಮನವಿ ಮಾಡಿದರು.

ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ರವಿವಾರ ಕ್ಷೇತ್ರದ ಮುಖಂಡರುಗಳ ಹಾಗೂ ಅಧಿಕಾರಿಗಳ ತುರ್ತು ಸಭೆ ನಡೆಸಿ ಮಾತನಾಡಿ, ಹಿಜಾಬ್ ವಿಚಾರ ಕುರಿತು ಸಾಮಾಜಿಕ ಜಾಲತಾನಗಳಲ್ಲಿ ಶಾಂತಿ ಕದಡುವ ಕೆಲಸಗಳಾಗುತ್ತಿವೆ, ತಮ್ಮ ಮಕ್ಕಳಿಗೆ ಬುದ್ಧಿವಾದ ಹೇಳಿ ಶಾಲೆ, ಕಾಲೇಜು ಆವರಣಗಳಲ್ಲಿ ಯಾವುದೇ ಧರ್ಮದ ಉಡುಪುಗಳನ್ನು ಹಾಕದಂತೆ ಹೈಕೋರ್ಟ ಮಧ್ಯಂತರ ಆದೇಶ ನೀಡಿದ್ದು, ನ್ಯಾಯಾಲಯದ ಆದೇಶವನ್ನು ನಾವೆಲ್ಲರೂ ಪಾಲನೆ ಮಾಡಬೇಕು ಎಂದರು.

ಬೆಂಗಳೂರಿನ ಕಾಲೇಜಿನಲ್ಲಿ ಯುವತಿಯೋರ್ವಳು ಅಲ್ಲಾಹುಅಕ್ಬರ್ ಎಂದು ಭಾವೋದ್ವೇಗವಾಗಿ ಹೇಳಿದ್ದಾಳೆ. ಆದರೆ ಶಾಂತಿ ಸುವ್ಯಸ್ಥೆ ಹಾಳು ಮಾಡಲು ಅವಳಿಗೆ ಬಹುಮಾನ ಘೋಷಿಸಿದ್ದಾರೆ. ಇಂತಹ ಘಟನೆಗಳು ನಡೆಯಬಾರದಿತ್ತು. ಹಿಂದುಗಳು ಹಿಂದುಗಳಿಗೂ ಬಹುಮಾನ ಘೋಷಣೆ ಮಾಡುತ್ತಾರೆ ಹೀಗಾಗಿ ನಾವೆಲ್ಲರೂ ಸಹೋದರತ್ವದಲ್ಲಿ ಸಹಬಾಳ್ವೆ ನಡೆಸಬೇಕು.

ಸೋಮವಾರದಿಂದ ಶಾಲೆಗಳು ಪ್ರಾರಂಭವಾಗುತ್ತಿದ್ದು, ಮಕ್ಕಳ ಪರೀಕ್ಷೆಗಳು ಹತ್ತಿರ ಬರುತ್ತಿರುವ ಹಿನ್ನಲೆ ನಾವೆಲ್ಲರೂ ಮಕ್ಕಳ ಶಿಕ್ಷಣಕ್ಕೆ ಸಹಕಾರ ನೀಡಬೇಕಿದೆ. ಶಾಂತಿ ಸೌಹಾರ್ದಯುತವಾಗಿ ನಾವೆಲ್ಲರೂ ನೆಲೆಸಿದ್ದೆವೆ. ತಾಲೂಕಿನಲ್ಲಿ ಶಾಂತಿ ಸುವ್ಯವಸ್ಥೆ ಕದಡುವ ಕೇಲಸ ಮಾಡುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಇದೇ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -