spot_img
spot_img
spot_img
19.5 C
Belagavi
Wednesday, September 28, 2022
spot_img

ರಂಗ ಪಂಚಮಿ ನಿಮಿತ್ಯ ಮಾ.22 ರಂದು ಮದ್ಯ ಮಾರಾಟ ನಿಷೇಧ

spot_img

ಬೆಳಗಾವಿ: ನಗರದ ಶಹಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾರ್ಚ್ 22 (ಮಂಗಳವಾರ)ರಂದು ಸಾರ್ವಜನಿಕರು ರಂಗ ಪಂಚಮಿ ಆಚರಿಸಲಿದ್ದು, ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಮಾರ್ಚ್ 22( ಮಂಗಳವಾರ)ರಂದು ಬೆಳಿಗ್ಗೆ 6 ಗಂಟೆಯಿದ ರಾತ್ರಿ 12 ಗಂಟೆಯವರೆಗೆ ಮದ್ಯದ ಅಂಗಡಿ, ವೈನಶಾಪ್, ಬಾರ್, ಕ್ಲಬ್ ಮತ್ತು ಹೊಟೇಲ್ಗಳಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸಾಗಣಿಕೆಯನ್ನು ನಿಷೇಧಿಸಿ, ಮದ್ಯದ ಅಂಗಡಿಗಳನ್ನು ಹಾಗೂ ಕೆಎಸ್ಬಿಸಿಎಲ್ ಡಿಪೋಗಳನ್ನು, ಹೊಟೇಲ್ಗಳಲ್ಲಿರುವ ಬಾರ್ಗಳನ್ನು ಮುಚ್ಚತಕ್ಕದ್ದು. ಹಾಗೇ ಅಬಕಾರಿ ಸನ್ನದು ಅಂಗಡಿಗಳನ್ನು ಮುಚ್ಚಿ ಸೀಲ್ ಹಾಕತಕ್ಕದ್ದು ಎಂದು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಹಾಗೂ ಪೊಲೀಸ್ ಆಯುಕ್ತರಾದ ಡಾ. ಬೋರಲಿಂಗಯ್ಯ ಎಂ.ಜಿ. ಅವರು ತಿಳಿಸಿದ್ದಾರೆ.

ಅಬಕಾರಿ ಉಪ ಆಯುಕ್ತರು, ಕಾನೂನು ಸುವ್ಯವಸ್ಥೆಯ ಬೆಳಗಾವಿ ತಾಲೂಕು ಮತ್ತು ಉಪ ಪೊಲೀಸ್ ಆಯುಕ್ತರು, ಬೆಳಗಾವಿ ನಗರ ಹಾಗೂ ಅವರ ಅಧೀನ ಅಧಿಕಾರಿಗಳು, ಹೆಚ್ಚುವರಿ ಅಬಕಾರಿ ಅಧೀಕ್ಷಕರು, ಅಬಕಾರಿ ಉಪ-ಅಧೀಕ್ಷಕರು ರಂಗ ಪಂಚಮಿ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಮುಂದಾಗಬೇಕು. ನಿಯಮ ಮೀರಿದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಹಾಗೂ ಪೊಲೀಸ್ ಆಯುಕ್ತರಾದ ಡಾ. ಬೋರಲಿಂಗಯ್ಯ ಎಂ.ಜಿ. ಅವರು ತಿಳಿಸಿದ್ದಾರೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -