ನವದೆಹಲಿ: ಖ್ಯಾತ ತಂಪು ಪಾನೀಯ ಬ್ರ್ಯಾಂಡ್ ರಸ್ನಾವನ್ನು ಜನರಿಗೆ ಪರಿಚಯಿಸಿದ್ದ ರಸ್ನಾ ಸಮೂಹದ ಸಂಸ್ಥಾಪಕ ಅರೀಜ್ ಫಿರೋಜ್ಶಾ ಖಂಬಾಟ್ ವಿಧಿವಶರಾಗಿದ್ದಾರೆ.
ಅವರಿಗೆ 85 ವರ್ಷ ವಯಸ್ಸಾಗಿತ್ತು. ಅವರು ಅರೀಜ್ ಖಂಬಾಟ್ ಬೆನಿವೊಲೆಂಟ್ ಟ್ರಸ್ಟ್ ನ ಅಧ್ಯಕ್ಷರೂ ಆಗಿದ್ದರು. ಪಾರ್ಸಿ ಇರಾನಿ ಝಾರ್ಥೋಸ್ಟಿಸ್ ನ ವಿಶ್ವ ಒಕ್ಕೂಟದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
ಅರೀಜ್ ಫಿರೋಜ್ಶಾ ಅವರು ಭಾರತೀಯ ಕೈಗಾರಿಕೆ, ಉದ್ಯಮ, ಸಾಮಾಜಿಕ ಅಭಿವೃದ್ಧಿಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಸಮಾಜ ಸೇವೆಯ ಮೂಲಕವೂ ಪ್ರಸಿದ್ಧರಾಗಿದ್ದರು ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.