ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಹಿಂದೆ ರಾಯಣ್ಣ ಬ್ರಿಗೇಡ್ ಸ್ಥಾಪನೆ ಮಾಡಿದ್ದೆ. ಆಗ ಈ ಬ್ರಿಗೇಡ್ ನಿಲ್ಲಿಸುವಂತೆ ಯಡಿಯೂರಪ್ಪ ಅವರು ತಿಳಿಸಿದ್ದರು. ಹೀಗಾಗಿ ಬ್ರಿಗೇಡ್ ಸ್ಥಗಿತಗೊಳಿಸಿದ್ದೆ. ಆದರೆ ಈ ಬಾರಿ ಅಂತಹ ತಪ್ಪು ಮಾಡುವುದಿಲ್ಲ ಎಂದರು.
ಬಾಗಲಕೋಟೆಯಲ್ಲಿ ನಡೆಯುವ ಸಭೆಯಲ್ಲಿ ಉತ್ತರ ಕರ್ನಾಟಕ ಭಾಗದ 25 ಮಂದಿ ಸಾಧು ಸಂತರು ಭಾಗವಹಿಸಲಿದ್ದು, ಸುಮಾರು ಎರಡೂವರೆ ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.