spot_img
spot_img
spot_img
28.1 C
Belagavi
Thursday, September 29, 2022
spot_img

ತೋಟಗಾರಿಕೆ ತರಬೇತಿಗೆ ಅರ್ಹರಿಂದ ಅರ್ಜಿ ಆಹ್ವಾನ

spot_img

ಬೆಳಗಾವಿ: ಪ್ರಾಯೋಗಿಕ ತರಬೇತಿ ಯೋಜನೆಯಡಿಯಲ್ಲಿ ತೋಟಗಾರಿಕೆ ಇಲಾಖೆಯ ತೋಟಗಾರಿಕೆ 2022-23 ನೇ ಸಾಲಿನಲ್ಲಿ ಜಿಲ್ಲೆಯ ಅಭ್ಯರ್ಥಿಗಳಿಗೆ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಡ್ಯಾಂ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ತರಬೇತಿ ನೀಡಲಿದೆ. ಮೇ 5 2022ರಿಂದ ಫೆಬ್ರುವರಿ 28ರ 2023ರ ವರೆಗೆ 10 ತಿಂಗಳ ಕಾಲ ಈ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ತರಬೇತಿಯಲ್ಲಿ ಭಾಗವಹಿಸಲು ಅರ್ಹತೆ:

ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಉತ್ತೀರ್ಣರಾಗಿರಬೇಕು ತರಬೇತಿ ಬಯಸುವ ಅಭ್ಯರ್ಥಿಯ ತಂದೆ/ತಾಯಿ/ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು ಈ ಬಗ್ಗೆ ಪಹಣಿಯನ್ನು (RTC)ನೀಡುವುದು ಕಡ್ಡಾಯವಾಗಿರುತ್ತದೆ. ಸಾಮಾನ್ಯ ವರ್ಗದ ಅಭ್ಯರ್ಥಿಗೆ ಕನಿಷ್ಠ ವಯೋಮಿತಿ 18 ವರ್ಷಗಳು ಹಾಗೂ ಗರಿಷ್ಠ 30 ವರ್ಷಗಳು ಆಗಿರಬೇಕು. ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷಗಳು ಹಾಗೂ ಗರಿಷ್ಠ 33 ವರ್ಷಗಳು ಆಗಿರಬೇಕು. ಅಭ್ಯರ್ಥಿಯು ತರಬೇತಿ ಕೇಂದ್ರದಲ್ಲಿಯೇ ಇರಬೇಕು.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ವಿಧಾನ :

ಅರ್ಜಿಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ) ಬೆಳಗಾವಿ ರವರ ಕಛೇರಿಯಲ್ಲಿ ಅಥವಾ ಇಲಾಖೆಯ ವೆಬ್ಸೈಟ್ https://horticulturedir.karnataka.gov.in/ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು. ಸಾಮಾನ್ಯ ವರ್ಗದವರು 30 ರೂ, ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದವರು 15 ರೂ. ಗಳ ಮೌಲ್ಯದ ಇಂಡಿಯನ್ ಪೋಸ್ಟಲ್ ಆರ್ಡರ (IPO)ನ್ನು ಬೆಳಗಾವಿ ತೋಟಗಾರಿಕೆ ಉಪ ನಿರ್ದೇಶಕರು (ಜಿ.ಪಂ) ಇವರ ಹೆಸರಿನಲ್ಲಿ ಪಡೆದು ಅರ್ಜಿ ಜೊತೆಗೆ ಪೂರ್ಣ ಮಾಹಿತಿಗಳನ್ನು ತುಂಬಿ ಎಸ್.ಎಸ್.ಎಲ್.ಸಿ ಪ್ರಮಾಣ ಪತ್ರದ ಅಂಕ ಪಟ್ಟಿ, ಲಿವ್ಹಿಂಗ್ ಸರ್ಟಿಪಿಕೆಟ್, ಜಾತಿ ಪ್ರಮಾಣ ಪತ್ರ , ಸ್ವಂತ ಜಮೀನಿನ ಉತಾರ (RTC), ಹಿಡುವಳಿ ದೃಢೀಕರಣ ಪತ್ರದ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಲಗತ್ತಿಸಿ ಬೆಳಗಾವಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ), ರಾಣಿ ಚನ್ನಮ್ಮ ವೃತ್ತ ರವರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ರವರ ಕಛೇರಿಯಲ್ಲಿ ವಿಚಾರಿಸಬಹುದು.

ಎಲ್ಲಾ ಅಭ್ಯರ್ಥಿಗಳು ಏಪ್ರಿಲ್ 18 ರಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಗೆ ನೇರವಾಗಿ ಮೂಲ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಬೇಕು. ಈ ಸಂಬ0ಧವಾಗಿ ಈ ಕಛೇರಿಯಿಂದ ಮತ್ತೆ ಯಾವುದೇ ಪತ್ರ ವ್ಯವಹಾರ ಮಾಡಲಾಗುವುದಿಲ್ಲ. ಈ ಕುರಿತು ದೂರವಾಣಿ ಸಂಖ್ಯೆ 0831-2451422 ಮತ್ತು ಹಿಡಕಲ್ ಡ್ಯಾಂ ತರಬೇತಿ ಕೇಂದ್ರz ದೂರವಾಣಿ ಸಂಖ್ಯೆ 08333-263008 ಕ್ಕೆ ಸಂಪರ್ಕಿಸಿ ವಿಚಾರಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_img

Related News

ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂ.ಗಳ ಪರಿಹಾರ : ಸಿಎಂ ಬೊಮ್ಮಾಯಿ 

ಹಾವೇರಿ : ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂಪಾಯಿಗಳ ಪರಿಹಾರ ಒದಗಿಸಲಾಗುವುದು ಹಾಗೂ ಗಂಟು ರೋಗದ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು ಹಾವೇರಿಯ ಗುರುಭವನದಲ್ಲಿ ಹಾವೇರಿ...

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -