ಬೆಳಗಾವಿ ತಾಲೂಕಿನ ಕುಕಡೊಳ್ಳಿ ಗ್ರಾಮಕ್ಕೆ ಪ್ರೌಢ ಶಾಲೆ ಮಂಜೂರು ಮಾಡುವಂತೆ ಆಗ್ರಹಿಸಿ ಗ್ರಾಮದ ಶಿಕ್ಷಣ ಪ್ರೇಮಿ ಸಂಜಯ ಬೈರೋಜಿ, ಸಾಮಾಜಿಕ ಕಾರ್ಯಕರ್ತ ಮಾರುತಿ ಸಾರಾವರಿ ಅವರು ಬೆಳಗಾವಿ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ AC ಅವರಿಗೆ ಮನವಿ ಸಲ್ಲಿಸಿದರು.
ಕಳೆದ ಹತ್ತು ವರ್ಷಗಳಿಂದ ಸರ್ಕಾರಕ್ಕೆ ಜನ ಪ್ರತಿನಿಧಿಗಳಿಗೆ ಮನವಿ ಮಾಡುತ್ತಲಿದ್ದೆವೆ , ಕಳೆದ 13-03-2023 ರಂದು ಕರ್ನಾಟಕ ರಾಜ್ಯದ ರಾಜ್ಯಪಾಲರಿಗೆ, ಮಾಜಿ ಮುಖ್ಯ ಮಂತ್ರಿಗಳಿಗೆ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಗಳಿಗೆ ರಕ್ತದಿಂದ ಮನವಿ ಬರೆದು ಕರ್ನಾಟಕ ಸರ್ಕಾರದ ಗಮನ ಸೆಳೆಯಲಾಗಿತ್ತು ,ಪೋಸ್ಟ ಮುಖಾಂತರ ರಕ್ತದ ಮೂಲಕ ಮನವಿ ಪತ್ರ ಕಳಿಸಲಾಗಿತ್ತು. ಜನಪ್ರತಿನಿಧಿಗಳು ,ಅಧಿಕಾರಿಗಳು ಇಲ್ಲಿಯವರೆಗೂ ಪ್ರೌಢ ಶಾಲೆ ಮಾಡಿಲ್ಲ. ದಯವಿಟ್ಟು ಅಧಿಕಾರಿಗಳು ಇನ್ನಾದರೂ ಕುಕಡೊಳ್ಳಿಗೆ ಪ್ರೌಢ ಶಾಲೆಯನ್ನು ಶೀಘ್ರದಲ್ಲೆ ಮಂಜೂರು ಮಾಡುವಂತೆ ಆಗ್ರಹಿಸಿದರು.