ಬೆಳಗಾವಿ : ಪಂಚಮಸಾಲಿ ಸಮುದಾಯಕ್ಕೆ ಸರ್ಕಾರದ ಮೀಸಲಾತಿ ವಿಚಾರ ಸ್ಪಷ್ಟವಾಗಿಲ್ಲ, ಹೀಗಾಗಿ ಯಾರೂ ವಿಜಯೋತ್ಸವ ಅಥವಾ ತಿರಸ್ಕಾರ ವ್ಯಕ್ತಪಡಿಸಬೇಡಿ ಎಂದು ಕೂಡಲಸಂಗಮ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಮೀಸಲಾತಿ ನೀಡಿದೆ ಎಂದು ಸಚಿವರು ಹೇಳುತ್ತಿದ್ದಾರೆ. ಆದರೆ ಸಚಿವ ಮಾಧುಸ್ವಾಮಿ ಹೇಳಿಕೆ ಸ್ಪಷ್ಟವಾಗಿಲ್ಲ ಎಂದರು.
ಈ ಬಗ್ಗೆ ಪಂಚಮಸಾಲಿ ಸಮಾಜದ ಮುಖಂಡರಾದ ಈರಣ್ಣ ಕಡಾಡಿ, ಬಸನಗೌಡ ಪಾಟೀಲ್ ಯತ್ನಾಳ್ ಜೊತೆ ಮಾತನಾಡಿದ್ದೇನೆ. ಅವರು ಮುಂಜಾನೆ ಬರುತ್ತೇನೆ ಎಂದು ಹೇಳಿದ್ದಾರೆ. ಅವರು ಬಂದ ಮೇಲೆ ಚರ್ಚಿಸಿದ ನಂತರವೇ ನಿರ್ಧಾರ ತಿಳಿಸುತ್ತೇನೆ. ಕ್ಯಾಬಿನೆಟ್ ಚರ್ಚೆ ಪ್ರತಿ ನಮಗೆ ಇನ್ನೂ ಸಿಕ್ಕಿಲ್ಲ ಎಂದರು.