spot_img
spot_img
spot_img
spot_img
spot_img
30.1 C
Belagavi
Sunday, December 3, 2023
spot_img

ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಶ್ರೀರಂಗಪಟ್ಟಣದಲ್ಲಿ ನಿರ್ಬಂಧ – ನಿಷೇಧಾಜ್ಞೆ ಜಾರಿ

ಮಂಡ್ಯ: ಟಿಪ್ಪು ಜಯಂತಿ ಆಚರಣೆಗೆ ಚಿಂತನೆ ನಡೆಸಿರುವ ಹಿನ್ನೆಲೆ ಮಂಡ್ಯದ ಶ್ರೀರಂಗಪಟ್ಟಣದಲ್ಲಿ (ಶುಕ್ರವಾರ) ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಟಿಪ್ಪು ವಕ್ಫ್ ಎಸ್ಟೇಟ್‌ನಿಂದ ಟಿಪ್ಪು ಜಯಂತಿ ನಡೆಸಲು ಚಿಂತನೆ ನಡೆಸಲಾಗಿದೆ. ಮೈಸೂರು ಸೇರಿದಂತೆ ಹಲವೆಡೆಯಿಂದ ಜನ ಸೇರುವ ಸಾಧ್ಯತೆಯಿದ್ದು, ಸೂಕ್ಷ್ಮ ಪ್ರದೇಶವಾಗಿರುವ ಶ್ರೀರಂಪಟ್ಟಣದಲ್ಲಿ ಕಾರ್ಯಕ್ರಮಕ್ಕೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ಮುಂಜಾಗೃತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 144 ಸೆಕ್ಷನ್ ಜಾರಿಗೊಳಿಸಿ ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ಆದೇಶಿಸಿದ್ದಾರೆ.

ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ನಿಷೇಧಾಜ್ಞೆ ಇರಲಿದೆ. ಮೆರವಣಿಗೆ, ಪ್ರತಿಭಟನೆ, ರ‍್ಯಾಲಿಗಳಿಗೆ ನಿರ್ಬಂಧಿಸಲಾಗಿದೆ. ಬ್ಯಾನರ್, ಬಂಟಿಂಗ್ಸ್, ಧ್ವನಿವರ್ಧಕ, ಪಟಾಕಿ, ಡಿಜೆ ಬಳಕೆಗೂ ನಿಷೇಧ ಹೇರಲಾಗಿದೆ. ಘೋಷಣೆ ಕೂಗದಂತೆ, ಪ್ರಚೋದನಕಾರಿ ಚಿತ್ರವಿರುವ ಟೀ ಶರ್ಟ್ ಧರಿಸದಂತೆಯೂ ಆದೇಶ ಹೊರಡಿಸಲಾಗಿದೆ.

Related News

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ -ಜಮೀರ್ ಅಹ್ಮದ್ ಖಾನ್

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್​ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು -ಎಂ.ಬಿ.ಪಾಟೀಲ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....

Latest News

- Advertisement -
- Advertisement -
- Advertisement -
- Advertisement -