ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಧನ ಇಲಾಖೆಯ ಜೊತೆ ಪರಿಶೀಲನೆ ಸಭೆ ನಡೆಯುತ್ತಿದೆ. ಮಳೆ ಅಭಾವದಿಂದ ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್ ಸಮಸ್ಯೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ.
ವಿದ್ಯುತ್ ಕೊರತೆ ನೀಗಿಸಲು ಬೇರೆ ರಾಜ್ಯಗಳಿಂದ ಕಲ್ಲಿದ್ದಲು ಖರೀದಿ ಬಗ್ಗೆ ಇಂಧನ ಇಲಾಖೆ ಚಿಂತಿಸಿದ್ದು ಅಲ್ದೇ ಲೋಡ್ ಶೆಡ್ಡಿಂಗ್ ಆಗ್ತಿರುವ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗುತ್ತಿದೆ. ಸಭೆಯಲ್ಲಿ ಇಂಧನ ಸಚಿವ ಕೆ.ಜೆ ಚಾರ್ಜ್ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದಾರೆ.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....