spot_img
spot_img
spot_img
20.2 C
Belagavi
Wednesday, October 5, 2022
spot_img

RFO ಶಿವಾನಂದ ಖೇಡಗಿ ಮನೆ ಮೇಲೆ ಎಸಿಬಿ ದಾಳಿ

spot_img

ಬಾಗಲಕೋಟೆ: ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ರಾಜ್ಯದ 75 ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಬದಾಮಿ ಅರಣ್ಯ ಇಲಾಖೆ ಅಧಿಕಾರಿ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಇಲ್ಲದ ಅಪಾರ ಪ್ರಮಾಣದ ವಸ್ತುಗಳು ಹಾಗೂ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಬಾಗಲಕೋಟೆಯ ನವನಗರದ ಸೆಕ್ಟರ್ 15ರಲ್ಲಿರುವ ಬಾದಾಮಿ RFO ಶಿವಾನಂದ ಖೇಡಗಿ ಅವರ ಮನೆ, ಕಚೇರಿ ಮೇಲೆ ಏಕಕಾಲಕ್ಕೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಶಿವಾನಂದ ಖೇಡಗಿಯವರ ಅಳಿಯಂದಿರ 2ಮನೆಗಳ ಮೇಲೂ ದಾಳಿ ಮಾಡಿ ದಾಖಲೆ ಪತ್ರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನು ದಾಳಿ ವೇಳೆ ಶಿವಾನಂದ ನಿವಾಸದಲ್ಲಿ ಹಣ ಕೌಂಟಿಂಗ್ ಮಷಿನ್ ಪತ್ತೆ ಹಾಗೂ ಗಂಧದ ತುಂಡುಗಳು ಪತ್ತೆಯಾಗಿದ್ದು, ಅಪಾರ ಪ್ರಮಾಣದ ಚಿನ್ನ, ಬೆಳ್ಳಿ, ಕಾಗದ ಪತ್ರಗಳ ಪತ್ತೆಯಾಗಿದ್ದು, ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ.

spot_img

Related News

ಮುಜರಾಯಿ ಇಲಾಖೆಯ ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ : ರಾಜು ಕಾಗೆ

ಬೆಳಗಾವಿ: ಮುಜರಾಯಿ ಇಲಾಖೆಯ ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ‌ ಜೊಲ್ಲೆ ವಿರುದ್ಧ ಕಾಗವಾಡ ಕ್ಷೇತ್ರದ ಮಾಜಿ ಶಾಸಕ ರಾಜು ಕಾಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಐನಾಪೂರ ಪಟ್ಟಣದಲ್ಲಿ ಮಾತನಾಡಿರುವ...

ದುರ್ಗೆ ವೇಷ ಧರಿಸಿ ಹದಗೆಟ್ಟ ವಿರುದ್ಧ ಪ್ರತಿಭಟಿಸಿದ ಬಾಲಕಿ 

ಹುಬ್ಬಳ್ಳಿ : ದುರ್ಗೆಯ ವೇಷ ಧರಿಸಿ ಬಾಲಕಿಯೊಬ್ಬಳು ವೇಷ ಧರಿಸಿ ಹುಬ್ಬಳ್ಳಿಯಲ್ಲಿ ನೀರಿನ ಕೊಚ್ಚೆ ಗುಂಡಿಗಳಿಂದ ತುಂಬಿದ ರಸ್ತೆಯಲ್ಲಿ ನಡೆದಿದ್ದಾಳೆ. ಈ ವಿಡಿಯೋ ಮೂಲಕ ರಸ್ತೆಗಳ ದುರವಸ್ಥೆಯ ಬಗ್ಗೆ ಗಮನ ಸೆಳೆಯುವ ಪ್ರಯತ್ನದಲ್ಲಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -