ವಿಜಯಪುರ : ನಡೆದಾಡುವ ದೇವರು , ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇಂದು ರಾತ್ರಿ ವಿಧಿವಶರಾಗಿದ್ದಾರೆ.
ಇನ್ನು ಸಾಲು ಸಾಲಾಗಿ ಭಕ್ತರ ದರ್ಶನಕ್ಕೆ ಅವಕಾಶ ನೀಡಲು ಸಿದ್ದತೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಆಶ್ರಮದಲ್ಲಿ ಪೊಲೀಸರು ಅಲರ್ಟ್ ಹೆಚ್ಚಿನ ಸಂಖ್ಯೆಯಲ್ಲಿ ಆಶ್ರಮದ ಆವರಣದಲ್ಲಿ ನೆರೆದಿದ್ದ ಭಕ್ತರನ್ನು ಹೊರಕ್ಕೆ ಕಳುಹಿಸಲಾಗಿದ್ದು. ಆಶ್ರಮದ ಮುಂದೆ ಭಕ್ತರು ಕಣ್ಣೀರು ಹಾಕುತ್ತಿದ್ದಾರೆ. ಲಕ್ಷಾಂತರ ಭಕ್ತರನ್ನು ಅವರು ಅಗಲಿದ್ದಾರೆ.