ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ಖ್ಯಾತ ಖಳನಟ ಲಕ್ಷ್ಮಣ್ (74) ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ನಟ ಲಕ್ಷ್ಮಣ್ ಹೃದಯಾಘಾತ ಸಂಭವಿಸಿದ್ದರಿಂದ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.
ಯಜಮಾನ, ಸೂರ್ಯವಂಶ,ಒಲವಿನ ಉಡುಗೊರೆ, ದಾದಾ, ಸಾಂಗ್ಲಿಯಾನ ಸೇರಿಂತೆ 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ನಟನ ಅಗಲಿಕೆಗೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.