ನವದೆಹಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾ.ಖನ್ನಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ನ್ಯಾ.ಖನ್ನಾ ಅವರ ಹೆಸರನ್ನು ನ್ಯಾ.ಡಿವೈ ಚಂದ್ರಚೂಡ್ ಅವರು ಶಿಫಾರಸು ಮಾಡಿದ್ದರು. ಇವರು ಮುಂದಿನ ವರ್ಷ ಮೇ 13 ರವರೆಗೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ನ್ಯಾ.ಚಂದ್ರಚೂಡ್ ಅವರು ನ.10 ರಂದು ಹುದ್ದೆಯಿಂದ ನಿವೃತ್ತರಾದರು.
ಪ್ರಮಾಣವಚನ ಸ್ವೀಕಾರದ ವೇಳೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧಂಖರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಮಾಜಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಉಪಸ್ಥಿತರಿದ್ದರು.