ಬೆಳಗಾವಿ : ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷರಾದ ಸತೀಶ್ ಜಾರಕಿಹೊಳಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಮಹದಾಯಿ ಯೋಜನೆ ಜಾರಿಯಾಗಿ ಬೇಕೆಂದು ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಮಹಾದಾಯಿ ನದಿ ನೀರು ಹಂಚಿಕೆ ಕುರಿತು ಸುಪ್ರೀಂ ಕೋರ್ಟ್ ಆದೇಶ ಬಂದರು ಕೂಡ ಸರ್ಕಾರ ಕಾರ್ಯರೂಪಕ್ಕೆ ತರುವುದೇ ಇರುವುದು ಹಾಗೂ ಗೆಜೆಟ್ ಮಾಡದೇ ಇರುವುದು ರಾಜ್ಯದ ಹಿತಾಶಕ್ತಿಯೇ ಕಾಯುವುದಕ್ಕೆ ಸರ್ಕಾರ ಸಂಪೂರ್ಣ ವಿಫಲ ಹೊಂದಿದೆ. ಸರ್ಕಾರದ ವಿಫಲತೆಯನ್ನು ಜನರ ಮುಂದೆ ಇಡುತ್ತೇವೆ.
ಇದೇ ಜನವರಿ 11ನೇ ತಾರೀಖಿನಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಸ್ ಯಾತ್ರೆ ಮೂಲಕ ಚುನಾವಣಾ ಪ್ರಚಾರ ಕಾರ್ಯಕ್ರಮ ಬೆಳಗಾವಿಂದ ಹಮ್ಮಿಕೊಳ್ಳಲಿದ್ದಾರೆ. ಅದರ ಸಕಲ ಸಿದ್ಧತೆಯನ್ನು ಈಗಾಗಲೇ ಪ್ರಾರಂಭಿಸಿದ್ದೇವೆ.
ಚಿಕ್ಕೋಡಿ ಹಾಗೂ ಬೆಳಗಾವಿಯಲ್ಲಿ ಒಂದೇ ದಿನದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಚುನಾವಣೆಯ ಸನ್ನಿಹದಲ್ಲಿ ಆಕಾಂಕ್ಷಿಗಳ ಪಟ್ಟಿಯನ್ನು ಹೈಕಮಾಂಡಿಗೆ ರವಾನಿಸಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾವಿನ್ನು ಅದರ ಬಗ್ಗೆ ಸರಿಯಾದ ಮಾಹಿತಿ ಹಾಗೂ ಸಭೆ ತೆಗೆದುಕೊಂಡು ಅಂತಿಮ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು
ಈ ಸಂದರ್ಭದಲ್ಲಿ ಖಾನಾಪುರ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್, ಮಾಜಿ ಶಾಸಕ ಅಶೋಕ್ ಪಟ್ಟಣ, ವೀರ್ ಕುಮಾರ್ ಪಾಟೀಲ್, ರಮೇಶ್ ಕುಡಚಿ ಹಾಗೂ ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ್ ನವಲಗಟ್ಟಿ, ಚಿಕ್ಕೋಡಿ ಗ್ರಾಮೀಣ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.