ಜಿಲ್ಲಾ ಉಸ್ತುವಾರಿ ಸಚಿವರು ಸತೀಶ್ ಜಾರಕಿಹೊಳಿ ಅವರು ಹುಕ್ಕೇರಿ ತಾಲೂಕಿನ ಬೆನಕನಹೋಳಿ ಗ್ರಾಮದ ಲಕ್ಷ್ಮಣ ರಾಮ ಅಂಬಲಿ ಹಾಗೂ ಅವರ ಇಬ್ಬರು ಪುತ್ರರು ಭಾನುವಾರ ರಾತ್ರಿ ಘಟಪ್ರಭಾ ನದಿಗೆ ಮೀನು ಹಿಡಿಯಲು ತೆರಳಿದ್ದ ಸಂದರ್ಭದಲ್ಲಿ ದುರಾದೃಷ್ಟವಶಾತ್ ನೀರು ಪಾಲಾಗಿರುವ ಹಿನ್ನೆಲೆಯಲ್ಲಿ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ವೇಳೆ ಸರ್ಕಾದಿಂದ ಮಂಜೂರಾದ 10 ಲಕ್ಷ 50 ಸಾವಿರ ರೂ. ಗಳ ಪರಿಹಾರದ ಆದೇಶ ಪತ್ರವನ್ನು ವಿತರಿಸಿದರು. ಬೆಳಗಾವಿ ನಗರ ಅಭಿವೃದ್ಧಿ ಅಧಿಕಾರಿ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಗಳೆ, ಮಾಜಿ ರಾಜ್ಯಸಭಾ ಸದಸ್ಯ ಡಾ ಪ್ರಭಾಕರ್ ಕೋರೆ, ಮಾಜಿ ವಿಧಾನ ಪರಿಷತ ಸದಸ್ಯ ಹಾಗೂ ಬಿಜೆಪಿ ಮುಖಂಡರಾದ ಮಹಾಂತೇಶ್ ಕೌವಟಗಿಮಠ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.