ಚಿತ್ರದುರ್ಗ : ಗಡಿ ವಿವಾದದ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಕರ್ನಾಟಕ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಪರಿಸ್ಥಿತಿಯನ್ನು ತಿಳಿಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು ಎಂದರು.
ಗಡಿ ಸಂಘರ್ಷದಿಂದ ಬೆಳಗಾವಿ ಬೆಳವಣಿಗೆ ಕುಂಠಿತವಾಗುತ್ತದೆ. ಯಥಾಸ್ಥಿತಿ ಕಾಯಿದುಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದರು ಹೇಳಿದರು.