ವರದಿ : ರತ್ನಾಕರ ಗೌಂಡಿ
ಬೆಳಗಾವಿ : ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕಾರಣಿ ಸಭೆ ಆರಂಭವಾಗಿದ್ದು, ಕಾಂಗ್ರೆಸ್ ನಾಯಕರಗಳು ಈಗಾಗಲೇ ಸಭೆಗೆ ಆಗಮಿಸಿದ್ದಾರೆ.
ಇದಕ್ಕೂ ಮುನ್ನ ಸುದ್ದಿಗಾರರ ಪ್ರಶ್ನೆಗೆ ಶಾಸಕ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು , ಬೆಳಗಾವಿ ಜಿಲ್ಲೆಯಲ್ಲಿ 18 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಹೆಚ್ಚಿನ ಆಕಾಂಕ್ಷಿಗಳಿದ್ದು ಯಾವ ರೀತಿ ಇದನ್ನು ನಿಭಾಯಿಸಲಿದ್ದೀರಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪಕ್ಷದ ಮಾನದಂಡವಿದೆ ಅದರಂತೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅಲ್ಲದೆ ಈ ಎಲ್ಲಾ ಪ್ರಕ್ರಿಯೆಗಳಿಗೆ ಎರಡು ತಿಂಗಳ ಕಾಲ ಅವಧಿ ಬೇಕಾಗುತ್ತದೆ ಎಂದರು.
ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳು ಠೇವಣಿ ಇಟ್ಟಿರದರಿಂದ ಅಪಸ್ವರ ಕೇಳಿ ಬರುತ್ತಾ ಇದೆ. ಅವರು ಸಾಲ ಮಾಡಿ ಠೇವಣಿ ಇಟ್ಟಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವರು ಪಕ್ಷಕ್ಕೆ ಸೇವೆ ಸಲ್ಲಿಸಿದ್ದಾರೆ ಇದರಲ್ಲಿ ಅಪಸ್ವರದ ಮಾತಿಲ್ಲಿ ಬಂತು ಎಂದರು.