ಬೆಂಗಳೂರು : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳ ಮಾಡಿದ ಹಿನ್ನೆಲೆಯಲ್ಲಿ 36 ಇಲಾಖೆಗಳಲ್ಲಿ ರೋಸ್ಟರ್ ಬಿಂದು ಪರಿಷ್ಕರಣೆ ವಿಳಂಬವಾಗಿದ್ದು, ಸುಮಾರು 25 ಸಾವಿರ ಹೊಸ ನೇಮಕಾತಿ ಪ್ರಕ್ರಿಯೆಗೆ ತಡೆ ಬಿದ್ದಿದೆ.
11,133 ಪೌರ ಕಾರ್ಮಿಕರ ಕಾಯಂಗೊಳಿಸುವುದು ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಸುಮಾರು 25 ಸಾವಿರ ಹೊಸ ನೇಮಕಾತಿಗೆ ತಡೆ ಬಿದ್ದಿದೆ.
ರಾಜ್ಯ ಸರ್ಕಾರವು ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳಿಗೆ ನವೆಂಬರ್ 1 ರಿಂದ ಜಾರಿಯಾಗುವಂತೆ ಶೈಕ್ಷಣಿಕ ಸಂಸ್ತೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ ಹೆಚ್ಚಿಸಿ ಆದೇಶ ಹೊರಡಿಸಿತ್ತು.
ಈ ಪ್ರಕಾರ ರೋಸ್ಟರ್ ಬಿಂದುಗಳನ್ನು ಗುರುತಿಸುವ ಪ್ರಕ್ರಿಯೆ ಅಂತಿಮಗೊಂಡು ಅಧಿಕೃತವಾಗಿ ಪ್ರಕಟವಾಗುವವರೆಗೆ ಎಲ್ಲ ನೇಮಕಾತಿ ಪ್ರಕ್ರಿಯೆಗಳನ್ನು ತಡೆಹಿಡಿಯಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.