spot_img
spot_img
spot_img
spot_img
spot_img
spot_img
spot_img
spot_img
spot_img
21 C
Belagavi
Wednesday, September 27, 2023
spot_img

ಸಿಎಂ ಸಿದ್ದುವಿನಿಂದ ಸಿಹಿ ಸುದ್ದಿ ಇಲ್ಲದೆ ನೋಡಿ ಸಂಪೂರ್ಣ ಬಜೆಟ್ ಮಾಹಿತಿ

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಆರಂಭಿಸಿದ್ದಾರೆ.14ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ, ಈ ಮೂಲಕ ದಾಖಲೆ ಬರೆಯಲಿದ್ದಾರೆ.

‘ತೆಂಗು, ಅಡಕೆ, ದ್ರಾಕ್ಷಿ, ದಾಳಿಂಬೆ ಬೆಳೆ ಸಂಸ್ಕರಣೆಗೆ 10 ಕೋಟಿ ವೆಚ್ಚದಲ್ಲಿ ಯೋಜನೆ ಜಾರಿ, ಚಿಕ್ಕಮಗಳೂರು ಕಾಫಿ, ಪ್ರವಾಸೋದ್ಯಮ ಉತ್ತೇಜನಕ್ಕೆ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಶಿಡ್ಲಘಟ್ಟದಲ್ಲಿ 75 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆ. ಅನುಗ್ರಹ ಯೋಜನೆ ಮರು ಜಾರಿ ಮಾಡಿ ‘ಕುರಿ ಮೇಕೆ ಮೃತಪಟ್ಟರೆ 5 ಸಾವಿರ ರೂ. ಪರಿಹಾರ ನೀಡಲಾಗುವುದು.

ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿಯನ್ನ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಜೊತೆಗೆ ಮಧ್ಯಮಾವಧಿ, ದೀರ್ಘಾವಧಿ ಸಾಲ ಮಿತಿಯನ್ನ 10 ಲಕ್ಷದಿಂದ 15 ಲಕ್ಷಕ್ಕೆ ಏರಿಸಲಾಗಿದ್ದು, ಗುಡ್ಡಗಾಡು ಪ್ರದೇಶದ ರೈತರಗೆ ಪಿಕ್ ವ್ಯಾನ್ ಖರೀದಿಗೆ 7 ಲಕ್ಷದವರೆಗೆ ಸಾಲ ನೀಡಲಾಗುವುದು.

ಹಿಂದಿನ ಸರ್ಕಾರದ ನೀರಾವರಿ ಯೋಜನೆಯನ್ನ ಕೈ ಬಿಡಲು ಸರ್ಕಾರ ನಿರ್ಧಾರ ಮಾಡಿದೆ. 19 ಕೆರೆ ತುಂಬಿಸು ಯೋಜನೆಗೆ ಬರೊಬ್ಬರಿ 770 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಯಾದಗಿರಿ ಸೇರಿ 15 ಜಿಲ್ಲೆಯ 99 ಕೆರೆಗಳಿಗೆ ನೀರು ತುಂಬಿಸಲು ಯೋಜನೆ ಜಾರಿ ಮಾಡಲಾಗಿದ್ದು, ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ ಮೊತ್ತ 22,252 ಕೋಟಿ ಮೀಸಲಿಡಲಾಗಿದೆ. ಇನ್ನು ಮೇಕೆದಾಟು ಯೋಜನೆಗೆ ಭೂಸ್ವಾಧಿನ ಪ್ರಕ್ರಿಯೆಗೆ ಚಾಲನೆ ನೀಡಲು ನಿರ್ಧಾರ ಮಾಡಲಾಗಿದೆ.

ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ ಸಿಎಂ ಸಿದ್ದರಾಮಯ್ಯ, ಬಜೆಟ್‌ನಲ್ಲಿ ಬೆಂಗಳೂರಿಗೆ ಬರೊಬ್ಬರಿ 45 ಸಾವಿರ ಕೋಟಿ ರೂ. ಅನುದಾನ. ಬೆಂಗಳೂರು ವೈಟ್‌ ಟಾಪಿಂಗ್​, ರಸ್ತೆ ಅಭಿವೃದ್ಧಿ, ನಗರೋತ್ಥಾನ, ತಾಜ್ಯ ನಿರ್ವಹಣೆ, ರಾಜಕಾಲುವೆ ತೆರವು & ದುರಸ್ತಿಗೆ ಅನುದಾನ, ಮೆಟ್ರೋ, ಬೆಂಗಳೂರು ಉಪನಗರ ರೈಲ್ವೆ ಯೋಜನೆ, ಬ್ರ್ಯಾಂಡ್ ಬೆಂಗಳೂರಿಗೆ ಆಧ್ಯತೆ ನೀಡುವ ನಿಟ್ಟಿನಲ್ಲಿ 45 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ.

ಆರೋಗ್ಯ ಕ್ಷೇತ್ರಕ್ಕೆ ಬಜೆಟ್​ನಲ್ಲಿ ಭರ್ಜರಿ ಕೊಡುಗೆ ನೀಡಲಾಗಿದ್ದು, ಕೊಪ್ಪಳ, ಕಾರವಾರ ಕೊಡುಗು ಜಿಲ್ಲಾಸ್ಪತ್ರೆಯ ಉನ್ನತಿಕರಣಕ್ಕೆ ನಿರ್ಧಾರ ಮಾಡಲಾಗಿದೆ. ಕನಕಪುರ ತಾಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ, ಮೈಸೂರು, ಕಲಬುರಗಿ, ಬೆಳಗಾವಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಸೇರಿದಂತೆ ದೇಶದಲ್ಲೇ ಮೊದಲ ಅಂಗಾಗ ಜೋಡಣೆ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ಮೈಸೂರು ಮತ್ತು ಕಲಬುರ್ಗಿಯಲ್ಲಿ 30 ಕೋಟಿ ವೆಚ್ಚದಲ್ಲಿ ಟ್ರಾಮಾ ಕೇರ್ಸ ಸೆಂಟರ್ ತೆರೆಯಲಾಗುವುದು.

ಕುಡಿಯುವ ನೀರು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸರ್ಕಾರ ಮುಂದಾಗಿದ್ದು, 172 ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಧರಿಸಿದೆ. 19 ಕೆರೆಗಳಿಗೆ ನೀರು ತುಂಬಿಸಲು 770 ಕೋಟಿ ಹಣ ಮೀಸಲು ಇಡಲಾಗಿದೆ. ಬೆಳಗಾವಿ, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಬೀದರ್, ಉತ್ತರ ಕನ್ನಡ, ವಿಜಯನಗರ, ಕೊಪ್ಪಳ, ಕಲಬುರಗಿ ಹಾಗೂ ಯಾದಗಿರಿ ಸೇರಿ ಒಟ್ಟು 823,99 ಕೆರೆಗಳನ್ನು ತುಂಬಿಸಲು ನಿರ್ಧಾರ ಮಾಡಲಾಗಿದೆ.

ವಾಣಿಜ್ಯ ತೆರಿಗೆ ಇಲಾಖೆಯಿಂದ 1,01,000 ಲಕ್ಷ ಕೋಟಿ, ಅಬಕಾರಿ ಇಲಾಖೆಯಿಂದ 36,000 ಕೋಟಿ, ನೋಂದಣಿ & ಮುದ್ರಾಂಕ ಇಲಾಖೆಯಿಂದ 25,000 ಕೋಟಿ ಸೇರಿ ಒಟ್ಟು 1,62,000 ಕೋಟಿ ತೆರಿಗೆ ಸಂಗ್ರಹದ ಗುರಿಯನ್ನ ಸರ್ಕಾರ ಹೊಂದಿದೆ.

ಗ್ಯಾರಂಟಿಗಳ ಜಾರಿಗೆ ಶೇ. 26ರಷ್ಟು ಸಾಲ ಪಡೆಯಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಕೇಂದ್ರ ಸರ್ಕಾರದಿಂದ ಶೇಕಡಾ 4ರಷ್ಟು ಅನುದಾನದ ನಿರೀಕ್ಷೆಯಿದ್ದು, ಶೇಕಡ.50ರಷ್ಟು ತೆರಿಗೆ ಆದಾಯದಿಂದ ಹಣ ಹೊಂದಿಸಲು ನಿರ್ಧಾರ ಮಾಡಲಾಗಿದೆ ಎಂದರು.

ವಿಜಯಪುರದಲ್ಲಿ ಹೊಸ ವಿಮಾನ ನಿಲ್ದಾಣ ಯೋಜನೆಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ಅನುಮೋದನೆ ನೀಡಿದೆ. ಜೊತೆಗೆ ಕನಕಪುರದಲ್ಲಿ ಮೆಡಿಕಲ್ ಕಾಲೇಜ್ ನಿರ್ಮಾಣಕ್ಕೆ ಅಸ್ತು ಹೇಳಲಾಗಿದೆ. ಎಲ್ಲಾ ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ ನಿರ್ಮಾಣ ಮಾಡಲು ನಿರ್ಧಾರ ಮಾಡಲಾಗಿದೆ.

ಪುನೀತ್ ರಾಜಕುಮಾರ್ ಸ್ಮರಣಾರ್ಥ ಆರೋಗ್ಯ ವ್ಯವಸ್ಥೆ ಕಲ್ಪಿಸಲು ಸರ್ಕಾರ 6 ಕೋಟಿ ರೂಪಾಯಿ ಮೀಸಲಿಟ್ಟಿದೆ. ಹಠಾತ್‌ ಹೃದಯಾಘಾತ ತಪ್ಪಿಸಲು ಆಸ್ಪತ್ರೆಗಳಲ್ಲಿ ಎಇಡಿ ವ್ಯವಸ್ಥೆ ಮಾಡಲಾಗಿದೆ.

‘ಶಿಕ್ಷಣ ಇಲಾಖೆ 37,000 ಕೋಟಿ ಅನುದಾನ ಮೀಸಲು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 24,000 ಕೋಟಿ, ಇಂಧನ ಇಲಾಖೆ 22,000 ಕೋಟಿ, ನೀರಾವರಿ ಇಲಾಖೆ 19,000 ಕೋಟಿ, ಗ್ರಾಮೀಣಾಭಿವೃದ್ಧಿ & ಪಂಚಾಯತ್​ರಾಜ್ ಇಲಾಖೆ 18,000 ಕೋಟಿ, ಒಳಾಡಳಿತ & ಸಾರಿಗೆ ಇಲಾಖೆ 16,000 ಕೋಟಿ, ಕಂದಾಯ ಇಲಾಖೆ 16,000 ಕೋಟಿ, ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ 14,000 ಕೋಟಿ, ಸಮಾಜ ಕಲ್ಯಾಣ ಇಲಾಖೆ 11,000 ಕೋಟಿ ಮೀಸಲು, ಲೋಕೋಪಯೋಗಿ ಇಲಾಖೆ 10,000 ಕೋಟಿ, ಕೃಷಿ & ತೋಟಗಾರಿಕೆ ಇಲಾಖೆ 5,800 ಕೋಟಿ ಸೇರಿ ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ ಮೀಸಲಿಡಲಾಗಿದೆ.

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ನೀಡುವ ಊಟದಲ್ಲಿ ಪರಿಷ್ಕರಣೆ ಮಾಡಲಾಗಿದ್ದು, ವಾರದಲ್ಲಿ 2 ಬಾರಿ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ ಮಾಡಲು ನಿರ್ಧಾರ ಮಾಡಲಾಗಿದೆ. ಈ ಮೂಲಕ ಬಿಸಿಯೂಟ ಯೋಜನೆಗೆ 280 ಕೋಟಿ ನೀಡಲು ನಿರ್ಧರಿಸಲಾಗಿದ್ದು, ಈ ಯೋಜನೆ ಇದೀಗ 9 ಮತ್ತು 10ನೇ ತರಗತಿಗೂ ವಿಸ್ತರಣೆಯಾಗಲಿದೆ.

ಮಕ್ಕಳಲ್ಲಿನ ಕಲಿಕಾ ದೋಷಗಳ ನಿವಾರಣೆಗೆ ಸರ್ಕಾರ ಕ್ರಮ ಕೈಗೊಂಡಿದ್ದು, 80 ಕೋಟಿ ರೂ. ವೆಚ್ಚದಲ್ಲಿ ಕಲಿಕಾ ಕಾರ್ಯಕ್ರಮ ರೂಪಿಸಲು ನಿರ್ಧಾರ ಮಾಡಲಾಗಿದೆ. ಮರುಸಿಂಚನ ಯೋಜನೆಯಡಿ ಪ್ರೌಢಹಂತದ ಪರೀಕ್ಷೆಗೆ ಸಜ್ಜುಗೊಳಿಸಲು ಮಕ್ಕಳಿಗೆ ವಿಶೇಷ ತರಬೇತಿ ಜೊತೆಗೆ ಮಾಧ್ಯಮಿಕ, ಪದವಿ ಪೂರ್ವ ಕಾಲೇಜುಗಳಲ್ಲಿ ಲ್ಯಾಬ್​ ಆರಂಭ ಮಾಡಲಾಗುವುದು. ಇನ್ನು 2 ಕೋಟಿ ರೂ. ವೆಚ್ಚದಲ್ಲಿ ಪ್ರಯೋಗಾಲಯಗಳ ಸ್ಥಾಪನೆಗೆ ಅಸ್ತು ಎನ್ನಲಾಗಿದೆ. ಮತ್ತು ರಾಜ್ಯದ ಪ್ರತಿ ಕಂದಾಯ ವಿಭಾಗದಲ್ಲಿ 4 ಲ್ಯಾಬ್​ಗಳ ಸ್ಥಾಪನೆ ಮಾಡಲಾಗುವುದು.

ಕಲ್ಯಾಣ ಕರ್ನಾಟಕದ ಸರ್ವತೋಮುಖ ಪ್ರಗತಿಗೆ ಅನುದಾನ ನೀಡಲಾಗಿದ್ದು, ರಾಯಚೂರಿನ ಕಲ್ಮಲಾ ಜಂಕ್ಷನ್​ನಿಂದ ಸಿಂಧನೂರಿನವರೆಗೆ ಹೈಬ್ರಿಡ್ ಆನ್ಯೂಟಿ ಮಾದರಿಯ ರಸ್ತೆ ನಿರ್ಮಾಣಕ್ಕೆ 1696 ಕೋಟಿ ವೆಚ್ಚದಲ್ಲಿ 78 ಕಿ.ಮೀ ಉದ್ದದ ರಸ್ತೆ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ಜೊತೆಗೆ 4,083 ಕೋಟಿ ವೆಚ್ಚದಲ್ಲಿ ಅಂತರ್ ಜಿಲ್ಲಾ ಸಂಪರ್ಕ ಕಲ್ಪಿಸಲು 2400 ಕಿ.ಮೀ ಜಿಲ್ಲಾ ರಸ್ತೆಗಳ ಅಭಿವೃದ್ಧಿಗಾಗಿ ನಿರ್ಧರಿಸಲಾಗಿದೆ.

ರಾಜ್ಯದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತಿಗೆ ಅನುದಾನ ಘೋಷಣೆ ಮಾಡಲಾಗಿದೆ. ಕೆಪೆಕ್ ಸಂಸ್ಥೆಯ ಮೂಲಕ ರೈತ ಉತ್ಪಾದಕ ಸಂಸ್ಥೆಗಳು, ಸ್ಟಾರ್ಟಪ್, ಕಿರು ಆಹಾರ ಸಂಸ್ಕರಣಾ ಉದ್ದಿಮೆದಾರರಿಗೆ ಬೆಂಬಲ ನೀಡಲು ಬಜೆಟ್​ನಲ್ಲಿ 5 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿ ಮಾಇಡದ್ದ ಎಪಿಎಂಸಿ ಕಾಯ್ದೆ ವಾಪಸ್​ಗೆ ನಿರ್ಧಾರ ಮಾಡಲಾಗಿದೆ. ರೈತರ ಹಿತದೃಷ್ಟಿಯಿಂದ ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಲಾಗಿದ್ದು, ‘ಕಾಯದ ನಿಧಿ’ ಯೋಜನೆಯ ಅನುದಾನವನ್ನು 10,000 ರೂಪಾಯಿಯಿಂದ 25 ಸಾವಿರ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.

ಜಲಸಂಪನ್ಮೂಲ ಇಲಾಖೆಗೆ 1 ಲಕ್ಷ ಕೋಟಿ ಹಣ ಮೀಸಲಿಡಲಾಗಿದ್ದು, 10 ನೀರಾವರಿ ಯೋಜನೆ ಪೂರ್ಣಗೊಳಿಸಲು 940 ಕೋಟಿ ಮೀಸಲಿಡಲಾಗಿದೆ. ಕುಡಿಯುವ ನೀರು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಅನುದಾನ ಘೋಷಿಸಲಾಗಿದ್ದು, 172 ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಧಾರ ಮಾಡಿದೆ. 19 ಕೆರೆಗಳಿಗೆ ನೀರು ತುಂಬಿಸಲು 770 ಕೋಟಿ ಹಣ ಮೀಸಲಿಡಲಾಗಿದೆ. ಬೆಳಗಾವಿ, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಬೀದರ್, ಉತ್ತರ ಕನ್ನಡ, ವಿಜಯನಗರ, ಕೊಪ್ಪಳ, ಕಲಬುರಗಿ ಹಾಗೂ ಯಾದಗಿರಿ ಸೇರಿ ಒಟ್ಟು 823,99 ಕೆರೆಗಳನ್ನು ತುಂಬಿಸಲು ನಿರ್ಧಾರ ಮಾಡಲಾಗಿದೆ.

ವಿಜಯಪುರದಲ್ಲಿ ಹೊಸ ವಿಮಾನ ನಿಲ್ದಾಣ ಯೋಜನೆಗೆ ಅನುಮೋದನೆ ನೀಡಲಾಗಿದೆ. ಕನಕಪುರದಲ್ಲಿ ಮೆಡಿಕಲ್ ಕಾಲೇಜ್ ನಿರ್ಮಾಣಕ್ಕೆ ಅಸ್ತು ಎನ್ನಲಾಗಿದ್ದು, ಎಲ್ಲಾ ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ.

 

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -