spot_img
spot_img
spot_img
18.2 C
Belagavi
Monday, September 26, 2022
spot_img

ಶಂಕರಾಚಾರ್ಯರ ತತ್ವಗಳು ಸಾಧನೆಗೆ ಪೂರಕ: ಶಾಸಕ ಬೆನಕೆ

spot_img
spot_img

For Breaking News Download App

ಬೆಳಗಾವಿ :  ಯಾವುದೇ ಯಶಸ್ಸು ಕೈಗೂಡಬೇಕಾದರೆ ಶ್ರಮದ ಜೊತೆಗೆ ದೇವರ ಆಶೀರ್ವಾದವೂ ಇರಬೇಕಾಗುತ್ತದೆ. ಅಂತಹ ದೇವರ ಸಾನಿಧ್ಯವನ್ನು ಕರುಣ ಸುವಲ್ಲಿ ಶಂಕರಾಚಾರ್ಯರ ಚಿಂತನೆ, ತತ್ವಗಳು ಪೂರಕವಾಗಿವೆ ಎಂದು ಬೆಳಗಾವಿ ಉತ್ತರ ಶಾಸಕ ಅನೀಲ ಬೆನಕೆ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ  ಇಲಾಖೆಯ ಸಹಯೋಗದಲ್ಲಿ ನಗರದ ಬಸವರಾಜ ಕಟ್ಟೀಮನಿ ಸಭಾ ಭವನದಲ್ಲಿ ಶುಕ್ರವಾರ (ಮೇ.06) ನಡೆದ ಶ್ರೀ ಶಂಕರಾಚಾರ್ಯರ ಜಯಂತ್ಯೋತ್ಸವ-2022 ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ಪೂರ್ತಿ ಸುತ್ತಿದ ಸಂತ ಶಂಕರಾಚಾರ್ಯರು ಹಿಂದೂ ಧರ್ಮದ ಕುರಿತಾಗಿ ಜಾಗೃತಿ ಮೂಡಿಸುವ ಜೊತೆಗೆ ಶಾಂತಿ, ಸಹನೆ, ಸಂಘಟನೆ, ಮಾನವತ್ವದ ತತ್ವಗಳನ್ನು ಸಾರಿದರು ಎಂದು ಹೇಳಿದರು.

ಜಯಂತ್ಯೋತ್ಸವದಲ್ಲಿ ಶಂಕರಾಚಾರ್ಯರ ಕುರಿತಾಗಿ ಉಪನ್ಯಾಸ ನೀಡಿದ ಶಂಕರಾಚಾರ್ಯರ ಅನುಯಾಯಿಗಳಾದ ಡಾ. ನರೇಂಧ್ರ ನಾರಾಯಣ ವಾಳೇಕರ ಅವರು ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಸಂಚಾರ ಕೈಗೊಂಡ ಸಚ್ಚಿದಾನಂದ ಶಂಕರಾಚಾರ್ಯರು ಹಿಂದೂ ಧರ್ಮದ ಸಂಘಟನೆಗಾಗಿ ಅವಿರತ ಶ್ರಮಿಸಿದರು. ಆವತ್ತು ಶಂಕರಾಚಾರ್ಯರು ಪರಿಚಯಿಸಿ, ಪಸರಿಸಿದ ಉದಾತ್ತ ತತ್ವಗಳು ಇವತ್ತಿಗೂ ಸಮಾಜಕ್ಕೆ ಸೂಕ್ತವಾಗಿವೆ ಎಂದು ಡಾ. ನರೇಂದ್ರ ನಾರಾಯಣ ವಾಳೇಕರ ಅವರು ಹೇಳಿದರು.

ಅವರು ಹಿಂದೂ ಧರ್ಮದ ಜಾಗೃತಿ, ಸಂಘಟನೆಗಾಗಿ ಇವತ್ತು ನಡೆಯುತ್ತಿರುವ ಅನೇಕ ಹೋರಾಟಗಳಿಗೆ ಶಂಕರಾಚಾರ್ಯರ ಚಿಂತನೆಗಳು ಮಾರ್ಗದರ್ಶಕ ವಾಗಿವೆ ಎಂದು ಹೇಳಿದರು.

ಶಂಕರಾಚಾರ್ಯರ ಭಾವಚಿತ್ರ ಮೆರವಣಿಗೆ:

ಶಂಕರಾಚಾರ್ಯರ ಜಯಂತ್ಯೋತ್ಸವ ಹಿನ್ನೆಲೆಯಲ್ಲಿ ಕುಮಾರ ಗಂಧರ್ವ ರಂಗಮಂದಿರದಿಂದ ಬಸವರಾಜ ಕಟ್ಟೀಮನಿ ಸಭಾ ಭವನದವರೆಗೆ ಸಂತ ಶಂಕರಾಚಾರ್ಯರ ಭಾವಚಿತ್ರ ಮೆರವಣ ಗೆ ನಡೆಸಲಾಯಿತು.

ಶಂಕರ ನಾಮಕರಣ:

ಭಾವಚಿತ್ರ ಮೆರವಣ ಗೆ ನಂತರ ಸಭಾಭವನದಲ್ಲಿ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷಾಪರ್ಚನೆ, ಪೂಜೆ ನೆರವೇರಿಸಲಾಯಿತು. ನಂತರದಲ್ಲಿ ಸಮಾಜದ ಸುಮಂಗಲೆಯರು ತೊಟ್ಟಿಲಲ್ಲಿ ಶಂಕರಾಚಾರ್ಯರ ಪುಟ್ಟ ಮೂರ್ತಿ ಇಟ್ಟು ತೂಗುವ ಮೂಲಕ ಸಾಂಪ್ರದಾಯಿಕವಾಗಿ ನಾಮಕರಣ ಮಾಡಿದರು.

ಆಕಾಶವಾಣ  ಮತ್ತು ದೂರದರ್ಶನ ಕಲಾವಿದರಾದ ಶ್ರೀರಂಗ ಜೋಶಿ ಪ್ರಾರ್ಥನೆ, ನಾಡಗೀತೆ, ಭಕ್ತಿಗೀತೆ ಪ್ರಸ್ತುತ ಪಡಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಕಾರ್ಯಕ್ರಮದಲ್ಲಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸರ್ವಮಂಗಳ ಅರಳೀಕಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಸಮಾಜದ ಮುಖಂಡರಾದ ಗುರುರಾಜ ಜೋಶಿ, ಬಿ.ಆರ್.ಪಾಟೀಲ, ವೆಂಕಟೇಶ ಕುಲಕರ್ಣಿ, ಪದ್ಮಜಾ ಕುಲಕರ್ಣಿ , ಉಮಾ ದೇಶಪಾಂಡೆ ಹಾಗೂ ಇತರರು ಉಪಸ್ಥಿತರಿದ್ದರು.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -