ಕೊಪ್ಪಳ : ಮದುವೆ ಮನೆಯಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ಪ್ರಚಾರ ನಡೆಸಿದ್ದು, ಕೊಪ್ಪಳ ಜಿಲ್ಲೆಯ 5 ಅಭ್ಯರ್ಥಿಗಳ ಹೆಸರನ್ನ ಘೋಷಣೆ ಮಾಡಿ ಅಚ್ಚರಿ ಮೂಡಿಸಿದ್ದಾರೆ.
ಕೊಪ್ಪಳದ ವನಬಳ್ಳಾರಿ ಗ್ರಾಮದ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅವರ ಸಹೋದರ ಸಂಬಂಧಿಯೊಬ್ಬರ ಮದುವೆಯಲ್ಲಿ ಸಿದ್ದರಾಮಯ್ಯ ಕಾಣಿಸಿಕೊಂಡಿದ್ದು, ಮದುವೆ ಮನೆಯ ವೇದಿಕೆಯನ್ನೇ ಬಳಸಿಕೊಂಡು ಸಿದ್ದರಾಮಯ್ಯ ಪ್ರಚಾರ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಕೊಪ್ಪಳ ಜಿಲ್ಲೆಯ 5 ಅಭ್ಯರ್ಥಿಗಳ ಹೆಸರನ್ನ ಘೋಷಣೆ ಮಾಡಿದ್ದಾರೆ.
ಕೊಪ್ಪಳದ ಕನಕಗಿರಿಗೆ ಶಿವರಾಜ ತಂಗಡಗಿ, ಕುಷ್ಟಗಿ ಕ್ಷೇತ್ರಕ್ಕೆ ಅಮರೇಗೌಡ ಭಯ್ಯಾಪೂರ, ಯಲಬುರ್ಗಾಕ್ಕೆ ಬಸವರಾಜ ರಾಯರೆಡ್ಡಿ, ಕೊಪ್ಪಳಕ್ಕೆ ರಾಘವೇಂದ್ರ ಹಿಟ್ನಾಳ ಹಾಗೂ ಗಂಗಾವತಿ ಕ್ಷೇತ್ರದಿಂದ ಇಕ್ವಾಲ್ ಅನ್ಸಾರಿಗೆ ಈ ಈ ಬಾರಿ ಚುನಾವಣೆಯಲ್ಲಿ ಮತ ನೀಡುವಂತೆ ಸಿದ್ದರಾಮಯ್ಯ ಜನರಿಗೆ ಮನವಿ ಮಾಡಿದ್ದಾರೆ.
ಇನ್ನೂ, ಹೆಲಿಕಾಪ್ಟರ್ ನಲ್ಲಿ ಬಂದ ಸಿದ್ದರಾಮಯ್ಯ ರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಹೆಲಿಕಾಪ್ಟರ್ ನಲ್ಲಿ ಬಂದ ಸಿದ್ದರಾಮಯ್ಯ ನೋಡೋಕೆ ನೂಕುನುಗ್ಗಲು ಸಂಭವಿಸಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ನಡೆದಿದೆ.