ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ದೆಹಲಿಯಲ್ಲಿ ತಡರಾತ್ರಿ ಸಭೆ ನಡೆಸಿದರು.
ಹಳೇ ಮೈಸೂರು ಭಾಗದಲ್ಲಿ ಲೋಕಸಭೆ ತಂತ್ರಗಾರಿಕೆ ಕುರಿತು ಸುದೀರ್ಘ ಮಾತುಕತೆ ನಡೆಸಲಾಯಿತು. ಸಚಿವ ಚಲುವರಾಯಸ್ವಾಮಿ, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಮತ್ತು ಕೆಲ ಪ್ರಮುಖ ನಾಯಕರು ಕೂಡ ಸಭೆಯಲ್ಲಿ ಭಾಗಿಯಾಗಿದ್ದರು. ಅಲ್ಲದೆ, ಒಕ್ಕಲಿಗರು ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ತಂತ್ರಗಾರಿಕೆ ಕುರಿತು ಚರ್ಚೆ ನಡೆಸಲಾಯಿತು. ಜೆಡಿಎಸ್ ಎಲ್ಲೆಲ್ಲಿ ಸ್ಪರ್ಧೆ ಮಾಡಬಹುದು ಎಂಬ ಮಾಹಿತಿ ಸಂಗ್ರಹ ಮಾಡಲಾಯಿತು. ಅಲ್ಲದೆ, JDS, ಬಿಜೆಪಿ ಮೈತ್ರಿ ಮಣಿಸಲು ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆ ಚರ್ಚೆ ಕೂಡ ನಡೆದಿದೆ ಎನ್ನಲಾಗುತ್ತಿದೆ.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....