Ad imageAd image

ಪ್ರಾಸಿಕ್ಯೂಷನ್ ವಿರುದ್ಧ ಫೈಟ್: ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ ಸಿದ್ದರಾಮಯ್ಯ

ratnakar
ಪ್ರಾಸಿಕ್ಯೂಷನ್ ವಿರುದ್ಧ ಫೈಟ್: ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ ಸಿದ್ದರಾಮಯ್ಯ
WhatsApp Group Join Now
Telegram Group Join Now

ಬೆಂಗಳೂರು: 4 ದಶಕಗಳ ರಾಜಕೀಯ ಜೀವನದಲ್ಲೇ ಸಿದ್ದರಾಮಯ್ಯಗೆ ಅತಿದೊಡ್ಡ ಅಗ್ನಿ ಪರೀಕ್ಷೆ ಎದುರಾಗಿದೆ. ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಟಗರು ಎಂದೇ ಖ್ಯಾತರಾರ ಸಿದ್ದರಾಮಯ್ಯ ವಿಚಲಿತಗೊಳ್ಳುವಂತೆ ಮಾಡಿದೆ. ಹೀಗಾಗಿ ಸಂಕಷ್ಟದಿಂದ ಪಾರಾಗಲು ಅವರು ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಭಾನುವಾರವೂ ಸಚಿವರು, ಆಪ್ತರು ಮತ್ತು ವಕೀಲರ ಜೊತೆ ಸಭೆ ನಡೆಸಿದ ಸಿಎಂ ಪ್ರಾಸಿಕ್ಯೂಷನ್ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ಸೋಮವಾರ ಅರ್ಜಿ ಸಲ್ಲಿಸಲಿದ್ದಾರೆ.

ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ರದ್ದುಪಡಿಸುವಂತೆ ರಿಟ್ ಅರ್ಜಿಯಲ್ಲಿ ಸಿದ್ದರಾಮಯ್ಯ ಹೈಕೋರ್ಟ್​​ಗೆ ಮನವಿ ಮಾಡಿದ್ದಾರೆ.

ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಕೂಡ ಚಿಂತನೆ ನಡೆದಿತ್ತು. ಈ ಮೂಲಕ ರಾಷ್ಟ್ರಮಟ್ಟದಲ್ಲೂ ರಾಜ್ಯಪಾಲರ ನಡೆ ಪ್ರತಿಧ್ವನಿಸುವಂತೆ ಮಾಡಿದರೆ, ರಾಜಕೀಯವಾಗಿ ಅನುಕೂಲವಾಗುತ್ತದೆಂಬ ಲೆಕ್ಕಾಚಾರವಿತ್ತು. ಆದರೆ, ಸುಪ್ರೀಂ ಮೊರೆ ಹೋದರೆ, ಪ್ರಕರಣ ಹೈಕೋರ್ಟ್‌ಗೆ ವರ್ಗಾವಣೆಯಾಗಬಹುದು ಎಂದು ವಕೀಲರು ಸಲಹೆ ನೀಡಿದ್ದಾರೆ. ಹೀಗಾಗಿ ಹೈಕೋರ್ಟ್‌ನಲ್ಲೇ ಇಂದು ರಿಟ್ ಅರ್ಜಿ ಸಲ್ಲಿಸಲಿದ್ದಾರೆ.

ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿರುವ ಸಿಎಂ ಪರ ವಕೀಲರು, ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಕಾನೂನು ಬಾಹಿರ ಎಂದು ವಾದ ಮಂಡಿಸಲಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 17ಎ ಅಡಿ ಪ್ರಾಸಿಕ್ಯೂಷನ್ ನೀಡಿರುವುದು ನಿಯಮಗಳ ಉಲ್ಲಂಘನೆಯಾಗಿದೆ. ಅಲ್ಲದೇ, ಪ್ರಾಸಿಕ್ಯೂಷನ್‌ ನೀಡುವ ಬಗ್ಗೆ 2021ರ ಸೆಪ್ಟಂಬರ್‌ನಲ್ಲಿ ಕೇಂದ್ರ ಸರ್ಕಾರವೇ ಚೆಕ್‌ಲಿಸ್ಟ್ ನೀಡಿದೆ. ಆ ಚೆಕ್‌ಲಿಸ್ಟ್ ಕೂಡಾ ಪಾಲನೆಯಾಗಿಲ್ಲ. ಇನ್ನು ಡಿಜಿ-ಐಜಿಪಿ ಮಟ್ಟದ ಅಧಿಕಾರಿಗಳು ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಬೇಕು. ಅನುಮತಿ ಕೇಳಲು ತನಿಖಾ ವರದಿ ಇರಬೇಕು. ಆದರೆ ಇಲ್ಲಿ ತನಿಖಾ ವರದಿಯೂ ಇಲ್ಲ, ಅಧಿಕಾರಿಗಳೂ ಇಲ್ಲ. ಖಾಸಗಿ ವ್ಯಕ್ತಿಗಳ ದೂರಿನನ್ವಯ ಪ್ರಾಸಿಕ್ಯೂಷನ್‌ಗೆ ನೀಡಿದ್ದಾರೆ. ರಾಜ್ಯಪಾಲರೇ ತನಿಖಾಧಿಕಾರಿಯಂತೆ ವರ್ತಿಸಿದ್ದಾರೆ ಎಂದು ಸಿಎಂ ಪರ ವಕೀಲರು ವಾದ ಮಂಡಿಸಲು ಸಿದ್ಧತೆ ನಡೆಸಿದ್ದಾರೆ. ಇದರ ಜೊತೆಗೆ ಸುಪ್ರೀಂಕೋರ್ಟ್‌ ಈ ಹಿಂದೆ ತೀರ್ಪು ನೀಡಿದ್ದ ಬೇರೆ ಬೇರೆ 7 ಪ್ರಕರಣಗಳನ್ನ ಉಲ್ಲೇಖಿಸಿ, ಪ್ರಾಸಿಕ್ಯೂಷನ್‌ಗೆ ನೀಡುವ ನಿಯಮ ಇದಲ್ಲ ಎಂದು ಹೈಕೋರ್ಟ್‌ನಲ್ಲಿ ಕಾನೂನು ಯುದ್ಧ ನಡೆಸಲಿದ್ದಾರೆ.

WhatsApp Group Join Now
Telegram Group Join Now
Share This Article