ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಮಾನಿಯೊಬ್ಬರು ಉಚಿತವಾಗಿ ಕೊತ್ತಂಬರಿ ಸೊಪ್ಪು ವಿತರಣೆ ಮಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯಸಚೇತಕ ಅಶೋಕ್ ಪಟ್ಟಣ ಅಭಿಮಾನಿ ಆಗಿರೋ ಅಪ್ಪಣ್ಣ ಬಾಡಗಾರ್ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಉಚಿತವಾಗಿ ಕೊತ್ತಂಬರಿ ಸೊಪ್ಪು ವಿತರಿಸಿದರು.
ಅಪ್ಪಣ್ಣ ಬಾಡಗಾರ್ ಅವರು ಕೊತ್ತಂಬರಿ ಕೊತಂಬರಿ ಅಪ್ಪಣ್ಣ ಎಂಬ ಹೆಸರಿನಿಂದಲೇ ಪ್ರಸಿದ್ಧಿ ಪಡೆದಿದ್ದಾರೆ. ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ನುಡಿದಂತೆ ಸರ್ಕಾರ ನಡೆಯುತ್ತಿದೆ. ಹಾಗಾಗಿ ಉಚಿತವಾಗಿ ವಿತರಣೆ ಮಾಡುತ್ತಿರುವುದಾಗಿ ಅಪ್ಪಣ್ಣ ತಿಳಿಸಿದ್ದಾರೆ.
ಸದ್ಯ ಅಪ್ಪಣ್ಣ ಉಚಿತವಾಗಿ ಕೊತ್ತಂಬರಿ ಸೊಪ್ಪು ವಿತರಣೆ ಮಾಡುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.