ಮಂಡ್ಯ: ಮುಂಬರುವ ಚುನಾವಣೆಯಲ್ಲಿ ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಮಾಡುದಿಲ್ಲಲ್ಲ, ಈ ಬಗ್ಗೆ ಯಾವುದೇ ಗೊಂದಲಗಳು ಬೇಡ ಎಂದು ವಿಪಕ್ಷ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಮೂಲಕ ಸೋತ ಕ್ಷೇತ್ರದ ಬಗ್ಗೆ ಸಿದ್ದರಾಮಯ್ಯಗೆ ಜಿಗುಪ್ಸೆ ಬಂದಂಗೆ ಕಾಣುತ್ತಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುದಿಲ್ಲ , ಈಗಾಗಲೇ ನನಗೆ ನಾಲ್ಕೈದು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವಂತೆ ಆಹ್ವಾನ ಬಂದಿದೆ ಎಂದಿದ್ದಾರೆ. ಆದರೆ ನಾನು ಎಲ್ಲಿ ಮಾಡಬೇಕು ಅಂತಾ ಇನ್ನೂ ತೀರ್ಮಾನಿಸಿಲ್ಲ ಎಂದರು.