ವಿಜಯಪುರ : ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ಸ್ಥಿರ ವಾಗಿದೆ ಎಂದು ವೈದ್ಯ ಮೂಲಿಮನಿ ಮಾಹಿತಿ ನೀಡಿದ್ದಾರೆ.ಆದರೆ ಸಿದ್ದೇಶ್ವರ ಶ್ರೀಗಳ ನಾಡಿಮಿಡಿತದಲ್ಲಿ ಸ್ವಲ್ಪ ಏರುಪೇರು ಆಗಿದೆ.
ಉಸಿರಾಟದಲ್ಲಿ ಸ್ವಲ್ಪ ಸಮಸ್ಯೆ ಆಗುತ್ತಿದೆ. ಹೀಗಾಗಿ ಆಕ್ಸಿಜನ್ ಕೊಡಲಾಗುತ್ತಿದೆ. ಪಲ್ಸ್, ಬಿಪಿ, ಸ್ವಲ್ಪ ಕಡಿಮೆಯಾಗಿದೆ. ಅವರು ಬೆಳಗ್ಗೆಯಿಂದಲೂ ಆಹಾರವನ್ನು ಸೇವಿಸಿಲ್ಲ ಎಂದು ಹೇಳಿದರು.
ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದು, ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ವಿಚಾರಿಸಿದ್ದಾರೆ. ಶ್ರೀಗಳ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸಿದ್ದೇಶ್ವರ ಶ್ರೀಗಳು ಒಬ್ಬ ಮಹಾನ್ ಸಂತ, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ನಾನು ವೈದ್ಯರ ಜೊತೆಗೆ ಮಾತನಾಡಿದ್ದೇನೆ. ಅವರೂ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಆದಷ್ಟು ಬೇಗ ಶ್ರೀಗಳು ಗುಣಮುಖರಾಗಲೆಂದು ನಾನು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದರು.