ಕಾರವಾರ : 2023ರ ವಿಧಾನಸಭೆ ಚುನಾವಣೆಯಲ್ಲಿ 25 ಕ್ಷೇತ್ರಗಳಲ್ಲಿ ಶ್ರೀ ರಾಮ ಸೇನೆಯ ಕಾರ್ಯಕರ್ತರು ಸ್ಪರ್ಧಿಸಲಿದ್ದಾರೆ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶ್ರೀರಾಮಸೇನೆಯಿಂದ ಐವರು ಸ್ವಾಮೀಜಿಗಳು ಸೇರಿದಂತೆ 25 ಕ್ಷೇತ್ರಗಳಲ್ಲಿ ಹಿಂದು ಕಾರ್ಯಕರ್ತರು ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ. ನಾನು ಕೂಡ ಕಾರ್ಕಳ ಅಥವಾ ತೇರದಾಳ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.
ಹೆಣದ ಮೇಲೆ ರಾಜಕೀಯ ಮಾಡಿದ ಬಿಜೆಪಿಗೆ ಮಾನವೀಯತೆ ಇದ್ದರೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಕರಣವನ್ನು ತಕ್ಷಣ ಮರುತನಿಖೆಗೆ ಕೊಡಬೇಕು ಆಗ್ರಹಿಸಿದ್ದಾರೆ.