ಬಾಗಲಕೋಟ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ರ= ಜರುಗಿದ ೨೦೨೪-೨೫ ನೇ ಸಾಲಿನ ಜಿಲ್ಲಾಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ಕು. ಸಾತ್ವಿಕ ಜಿ. ತೆಗ್ಗಿ ಉದ್ದಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ೨೦೨೪-೨೫ ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಸರಾ ಕ್ರೀಡಾಕೂಟದಲ್ಲಿ ಡಿವ್ಹಿಜನಲ್ ಲೇವಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಕು.ರಿತಿಕಾ ಮತ್ತು ಕು.ಪ್ರಾಂಜಲ ಪವಾರ ಪ್ರಥಮ ಸ್ಥಾನ ಪಡೆದು ಬೆಳಗಾವಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸೇಂಟ್ ಅನ್ನಿಯಸ್ ಲೈನ್ಸ್ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಸಿಸ್ಟರ್ ಅನ್ಸೆಲ್, ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ರವಿ ಸಂಗಮ, ಮಂಜುನಾಥ, ವರ್ಗದ ಗುರುಗಳು, ಬೋಧಕ-ಬೋಧಕೇತರ ಸಿಬ್ಬಂದಿ, ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.