spot_img
spot_img
spot_img
24.8 C
Belagavi
Thursday, June 1, 2023
spot_img

1.55 ಲಕ್ಷ ಪಡಿತರ ಚೀಟಿ ವಿತರಣೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಿರುವಂತ ಅರ್ಜಿಗಳಲ್ಲಿ 1.55 ಲಕ್ಷ ಅರ್ಜಿಗಳನ್ನು ಮಾನ್ಯಗೊಳಿಸಲಾಗಿದೆ. ಹೀಗಾಗಿ ಹೊಸ ಆದ್ಯತಾ ಪಡಿತರ ಚೀಟಿ ಸಲ್ಲಿಸಿದವರಿಗೆ ಪಡಿತರ ಚೀಟಿಗಳನ್ನು ವಿತರಿಸಲು ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯು ಎಲ್ಲಾ ಜಿಲ್ಲಾಧಿಕಾರಿಗಳಿಗೆ ರಾಜ್ಯದಲ್ಲಿ ಹೊಸದಾಗಿ ಆದ್ಯತಾ ಪಡಿತರ ಚೀಟಿ ಕೋರಿ ದಿನಾಂಕ 25-08-2022ರವರೆಗೆ 2,73,662 ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ 1,55,927 ಅರ್ಹ ಕುಟುಂಬಗಳಿಗೆ ಹೊಸ ಆದ್ಯತಾ ಪಡಿತರ ಚೀಟಿ ನೀಡುವ ಬಗ್ಗೆ ಜಿಲ್ಲೆಗಳಲ್ಲಿ ವರದಿ ಪಡೆದುಕೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿರುತ್ತದೆ ಎಂದಿದೆ.

ಹೊಸದಾಗಿ ಆದ್ಯತಾ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿರುವಂತ 2,73,662 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ಅದ್ಯಾತಾ ಪಡಿತರ ಚೀಟಿಯನ್ನು ಹೊಂದಲು ಅರ್ಹರಿರುವ ಒಟ್ಟು 1,55,927 ಅರ್ಜಿದಾರರಿಗೆ ಹೊಸ ಆದ್ಯತಾ ಪಡಿತರ ಚೀಟಿಯನ್ನು ವಿತರಿಸಲು ಆದೇಶ ಹೊರಡಿಸಿದೆ.

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -