spot_img
spot_img
spot_img
28.1 C
Belagavi
Thursday, September 29, 2022
spot_img

ST ಮೀಸಲಾತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕು: ಎಸ್‌ ಆರ್‌ ನವಲಿ ಹಿರೇಮಠ್‌

spot_img

ಬೆಂಗಳೂರು : ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ಆಯೋಗದ ವರದಿಯಂತೆ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡಾ 7.5 ಕ್ಕೆ ಏರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮುಂದಾಗಬೇಕು ಎಂದು ಸಮಾಜ ಸೇವಕ ಎಸ್‌ ಆರ್‌ ನವಲಿ ಹಿರೇಮಠ್‌ ಆಗ್ರಹಿಸಿದರು.

ಇಂದು ನಗರದ ಫ್ರೀಡಂ ಪಾರ್ಕಿನಲ್ಲಿ ಕಳೆದ 32 ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸುತ್ತಿರುವ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳವರು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು.

ಜನಸಂಖ್ಯೆ ಹೆಚ್ಚಾದಂತೆ ಮೀಸಲಾತಿಯ ಪ್ರಮಾಣವೂ ಹೆಚ್ಚಾಗಬೇಕು. ಆದರೆ, ರಾಜ್ಯ ಸರಕಾರ ಎಸ್‌.ಟಿ ಪಟ್ಟಿಗೆ ಹಲವಾರು ಜಾತಿಗಳನ್ನು ಸೇರ್ಪಡೆಗೊಳಿಸಿದೆ. ಆದರೆ, ಸೇರ್ಪಡೆಗೊಳಿಸಿದ ರೀತಿಯಲ್ಲೇ ಮೀಸಲಾತಿಯ ಪ್ರಮಾಣವನ್ನು ಹೆಚ್ಚಿಸಬೇಕಾಗಿತ್ತು.

ಆದರೆ, ಅದನ್ನು ಮಾಡದಂತಹ ಸರಕಾರ ಎಸ್‌.ಟಿ ಮೀಸಲಾತಿಯನ್ನು ಒತ್ತಡವನ್ನು ಹೆಚ್ಚಿಸಿದೆ. ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ವಾಲ್ಮೀಕಿ ರಾಜನಹಳ್ಳಿ ಪೀಠದ ಶ್ರೀ ಪ್ರಸನನ್ನಾಂದ ಮಹಾಸ್ವಾಮಿಗಳವರ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟದ ಪ್ರಮುಖ ಬೇಡಿಕೆಯಾದಂತಹ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಜಾರಿಗೊಳಿಸಬೇಕು ಎಂದು ಸರಕಾರವನ್ನು ಒತ್ತಾಯಿಸಿದರು.

spot_img

Related News

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ರೈಡ್ ಮಾಡ್ತಾರೆ : ಡಿಕೆಶಿ 

ಬೆಂಗಳೂರು: ಈಗಾಗಲೇ ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -