spot_img
spot_img
spot_img
spot_img
spot_img
spot_img
spot_img
spot_img
23.1 C
Belagavi
Thursday, September 28, 2023
spot_img

ಮೊರಾಕ್ಕೋದಲ್ಲಿ ಪ್ರಬಲ ಭೂಕಂಪಕ್ಕೆ 300 ಬಲಿ

ರಬತ್: ಶುಕ್ರವಾರ ತಡರಾತ್ರಿ ಮೊರಾಕೊದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ 300 ಜನ ಮೃತಪಟ್ಟ ವರದಿಯಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಮೊರಾಕ್ಕೋದ ರಾಷ್ಟ್ರೀಯ ಭೂಕಂಪನ ಮಾನಿಟರಿಂಗ್ ಮತ್ತು ಅಲರ್ಟ್ ನೆಟ್‍ವರ್ಕ್ ರಿಕ್ಟರ್ ಮಾಪಕದಲ್ಲಿ 6.8 ತೀವ್ರತೆ ದಾಖಲಾಗಿದೆ. ಪ್ರಸಿದ್ಧ ಪ್ರವಾಸಿ ತಾಣವಾದ ಮರಕೇಶ್‍ನ ನೈಋತ್ಯದ 71 ಕಿಲೋಮೀಟರ್ ದೂರದ 18.5 ಕಿಮೀ ಆಳದಲ್ಲಿದೆ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ. ಭೂಕಂಪದ ತೀವ್ರತೆಗೆ ಪುರಾತನ ಕಟ್ಟಡಗಳು ಸೇರಿದಂತೆ ಅನೇಕ ಕಟ್ಟಡಗಳಿಗೆ ಹಾನಿಯಾಗಿದೆ.

ಭೂಕಂಪದಿಂದಾಗಿ ನಗರದಲ್ಲಿ ವಿದ್ಯುತ್ ಹಾಗೂ ದೂರವಾಣಿ ಸಂಪರ್ಕ ಸ್ಥಗಿತಗೊಂಡಿದೆ. ಈಗ ತಾತ್ಕಾಲಿಕ ನೆಟ್‍ವರ್ಕ್ ವ್ಯವಸ್ಥೆ ಮಾಡಲಾಗಿದೆ. ಅವಶೇಷಗಳ ಅಡಿ ಸಿಲುಕಿದವರ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2004 ರಲ್ಲಿ ಈಶಾನ್ಯ ಮೊರಾಕ್ಕೋದ ಅಲ್ ಹೋಸಿಮಾದಲ್ಲಿ ಭೂಕಂಪ ಸಂಭವಿಸಿದಾಗ ಕನಿಷ್ಠ 628 ಜನರು ಸಾವನ್ನಪ್ಪಿದ್ದರು ಮತ್ತು 926 ಜನರು ಗಾಯಗೊಂಡಿದ್ದರು. 1980 ರಲ್ಲಿ ನೆರೆಯ ಅಲ್ಜೀರಿಯಾದಲ್ಲಿ (Algeria) 7.3 ತೀವ್ರತೆಯ ಭೂಕಂಪವು 2,500 ಜನರ ಸಾವಿಗೆ ಕಾರಣವಾಗಿತ್ತು. ಅಲ್ಲದೇ ಕನಿಷ್ಠ 300,000 ಜನರನ್ನು ನಿರಾಶ್ರಿತರನ್ನಾಗಿ ಮಾಡಿತ್ತು.

 

Related News

ಬೆಳಗಾವಿಯಲ್ಲಿ ಅದ್ದೂರಿ ಗಣೇಶ ವಿಸರ್ಜನೆ

ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...

ಹಾಕಿ ಆಸ್ಟ್ರೋಟರ್ಫ್ ಮೈದಾನಕ್ಕೆ ಬೇಡಿಕೆ ಜನತಾ ದರ್ಶನದಲ್ಲಿ ಹೇಳಿಕೆ: ಭರವಸೆ

ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -