ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚನೆ ಎಸಗಿದ ಆರೋಪದ ಕುರಿತು ಮಾತನಾಡಿದ ಸಚಿವ ಡಿ.ಸುಧಾಕರ್, ಭಾರತೀಯ ಜನತಾ ಪಕ್ಷದ ಆಂತರಿಕ ವಿಚಾರದ ಬಗ್ಗೆ ಪ್ರತಿಕ್ರಿಯಿಸಲ್ಲ. ಈಗಾಗಲೇ ಕೆಲವರು ಇಂಥದ್ದೇ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದಾರೆ ಎಂದರು.
ಸಚಿವರು, ಕಾಂಗ್ರೆಸ್ ಶಾಸಕರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಸಿಎಂ, ಡಿಸಿಎಂ ಟೀಂ ಇಲ್ಲ, ಇರುವುದು ಒಂದೇ ಅದು ಕಾಂಗ್ರೆಸ್ ಟೀಂ. ಐದು ವರ್ಷ ಪೂರೈಸಿ ಮತ್ತೆ ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದರು. ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಟಾಂಗ್ ನೀಡಿದ ಅವರು, ಕುಮಾರಸ್ವಾಮಿ ಸಿಎಂ ಆಗಿದ್ದಾಗ ಮಾಡಿದ್ದು ನಮ್ಮ ಮೇಲೆ ಹೇಳುತ್ತಿದ್ದಾರೆ. ಕಮಿಷನ್ ಪಡಿಯೋದು, ಕಟ್ ರೂಟ್ ಆಡಳಿತ ಗೊತ್ತಿಲ್ಲ. ರಾಜ್ಯದಲ್ಲಿ ಬರ ಇದೆ, ಡ್ಯಾಂಗಳಲ್ಲಿ ನೀರಿಲ್ಲ, ಕಲ್ಲಿದ್ದಲು ಅಭಾವವಿದೆ. ಕೃತಕವಾಗಿ ವಿದ್ಯುತ್ ಕೊರತೆ ಸೃಷ್ಠಿಸುವ ಪ್ರಶ್ನೆ ಉದ್ಭವಿಸಲ್ಲ ಎಂದರು.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...