spot_img
spot_img
spot_img
spot_img
spot_img
spot_img
spot_img
spot_img
spot_img
20.4 C
Belagavi
Sunday, September 24, 2023
spot_img

ನಾವು ಮೀಸಲಾತಿ ಕೊಡಿಸುವ ಸ್ವಾಮೀಜಿ : ವಚನಾನಂದ ಶ್ರೀ

ಬೆಳಗಾವಿ : ಪಂಚಮಸಾಲಿ ಸಮಾಜದ 2ಎ ಮೀಸಲಾತಿಗಾಗಿ ಹಲವಾರು ವರ್ಷಗಳ ಬೇಡಿಕೆ ಇದೆ. ಬೇಡಿಕೆಗೆ ಯಾವುದೇ ಹಿನ್ನಡೆಯಾಗಿಲ್ಲ ಎಂದು ಹರಿಹರ ಪಂಚಮಸಾಲಿ ಸಮಾಜದ ಜಗದ್ಗುರು ವಚನಾನಂದ ಸ್ವಾಮೀಜಿ ಭರವಸೆ ನೀಡಿದರು.

ಅವರು ಅಥಣಿ ಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಆಡದೆ ಮಾಡುವವನು ರೂಢಿಯೊಳು ಉತ್ತಮನು ಎನ್ನುತ್ತಾರೆ. ಅದರಂತೆ ಆದಷ್ಟು ಬೇಗನೆ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಸಿಗುವಂತೆ ಮಾಡಲಾಗುವುದು.ಇದರಲ್ಲಿ ಯಾವುದೇ ಸಂಶಯವಿಲ್ಲ. ಪಂಚಮಸಾಲಿ ಸಮಾಜದಲ್ಲಿ ಇನ್ನೂ ಹಲವು ಪೀಠಗಳು ಸ್ಥಾಪನೆ ಆದರೂ ಯಾವುದೇ ತೊಂದರೆಯಿಲ್ಲ ಎಂದು ವಚನಾನಂದ ಸ್ವಾಮೀಜಿ ತಿಳಿಸಿದರು.

ಪಂಚಮಸಾಲಿ ಪೀಠಗಳ ನಡುವೆ ಮತ್ತು ಯಾರ ನಡುವೆಯೂ ಭಿನ್ನಾಭಿಪ್ರಾಯವಿಲ್ಲ. ಸಮಾಜದ ಏಳಿಗೆಗೆ ಸ್ವಾಮೀಜಿಗಳು ಇರುತ್ತಾರೆ ಎಂದು ತಿಳಿಸಿದರು. ಹಾಗೆ ನಾನು ಗಡುವು ಕೊಡುವ ಸ್ವಾಮೀಜಿ ಅಲ್ಲ, ಮೀಸಲಾತಿ ಕೊಡಿಸುವ ಸ್ವಾಮೀಜಿ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

Related News

ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ -ಹೆಚ್​ಡಿಕೆ

ಬೆಂಗಳೂರಿಗೆ ಆಗಮಿಸಿದ ಹೆಚ್​ಡಿ ಕುಮಾರಸ್ವಾಮಿ ಅವರು ಕೇಂಪೇಗೌಡ ಏರ್ಪೋರ್ಟ್ ನಲ್ಲಿ ಮಾತನಾಡಿದರು. ಈ ವೇಳೆ, ಅಮಿತ್ ಷಾ ಹಾಗೂ ನಡ್ಡಾ ಜೊತೆ ನಡೆದ ಚರ್ಚೆಗಳ ಬಗ್ಗೆ ದೆಹಲಿಯಲ್ಲಿ ಹೇಳಿದ್ದೇನೆ. ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ...

9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ

ಬೆಂಗಳೂರು: 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. 9ನೇ ತರಗತಿ ಮಕ್ಕಳ ಕಲಿಕಾ ದೃಷ್ಟಿಯಿಂದ ಮಕ್ಕಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ ನಡೆಸಲು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -