spot_img
spot_img
spot_img
18.5 C
Belagavi
Thursday, September 29, 2022
spot_img

ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯಿತಿ ಸಿಇಓ ಭೇಟಿ ನೀಡುವುದು ಕಡ್ಡಾಯ : ಸಿಎಂ ಬೊಮ್ಮಾಯಿ 

spot_img

ಬೆಂಗಳೂರು : ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯಿತಿ ಸಿಇಓ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ನಡೆದ ರಾಜ್ಯದ ಎಲ್ಲ ಜಿಲ್ಲಾಪಂಚಾಯತ್ ಸಿಇಒಗಳ ಸಭೆಯಲ್ಲಿ ಪ್ರಗತಿ ಪರಿಶೀಲನೆ ಸಭೆ ಸಿಎಂ ಬೊಮ್ಮಾಯಿ, ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭೇಟಿ ನೀಡಿ ಪ್ರಗತಿ ಪರಿಶೀಲಿಸುವುದು ಕಡ್ಡಾಯ ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ನಮ್ಮ ಆಡಳಿತ ಶೈಲಿ ಭಿನ್ನವಾಗಿದ್ದು, ನನ್ನ ಕಣ್ಗಾವಲಿನಲ್ಲಿದ್ದು ನೀವು ಇದ್ದಿರಿ, ಎಲ್ಲರ ಕೆಲಸ ಕಾರ್ಯತತ್ಪರತೆ ಗಮನಿಸುತ್ತಿದ್ದೇನೆ ಎಂದರು.

ಗ್ರಾಮಗಳ ಸರ್ವತೋಮುಖ ಅಭಿವೃದ್ಧಿ ವಸತಿ ಸೇರಿದಂತೆ ಹಲವು ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಈ ಯೋಜನೆಗಳಿಗೆ ಸಂಬಂಧಿಸಿದಂತೆ ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ತಕ್ಷಣದಿಂದಲೇ ಕೆಲಸ ಆರಂಭಿಸುವಂತೆ ಸಿಎಂ ನಿರ್ದೇಶನ ನೀಡಿದ್ದಾರೆ. ಅಷ್ಟೇ ಅಲ್ಲದೆ ಕಾಲಮಿತಿಯಲ್ಲಿ ಕೆಲಸ ಮಾಡಬೇಕು ಎಂಬ ಸೂಚನೆ ನೀಡಿದ್ದಾರೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -