ವರದಿ : ರತ್ನಾಕರ ಗೌಂಡಿ
ಬೆಳಗಾವಿ : 2023ರ ವಿಧಾನಸಭೆಯ ಚುನಾವಣೆಗೆ ಕಾಂಗ್ರೆಸ್ ಪಕ್ಷ ಬರದಿಂದ ತಯಾರಿ ಪ್ರಾರಂಭಿಸಿದೆ. ನಗರದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಕಾರ್ಯದರ್ಶಿ ಬೆಳಗಾವಿ ವಿಭಾಗದ ಉಸ್ತುವಾರಿಯಾದ ವಿಶ್ವನಾಥ್ ಹಾಗೂ ಕರ್ನಾಟಕ ರಾಜ್ಯ ಚುನಾವಣಾ ಸಮಿತಿಯ ಸದಸ್ಯರಾದ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಟಿಕೆಟ್ ಆಕಾಂಕ್ಷಿಗಳ ಹಾಗೂ ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷರುಗಳ ಸಭೆಯನ್ನು ಕಾಂಗ್ರೆಸ್ ಕಚೇರಿಯಲ್ಲಿ ನಡೆಸಿದರು.
ಒಟ್ಟಾರೆ ಇಲ್ಲಿ ಗಮನಿಸಬೇಕಾಗಿರುವಂತ ವಿಷಯವೆಂದರೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ಯಾವುದೇ ರೀತಿಯ ತಪ್ಪು ನಡೆಯಬಾರದೆಂದು ಪ್ರತಿಯೊಂದು ಹೆಜ್ಜೆ ವನ್ನು ಬಹಳ ಜಾಣ್ಮೆಯಿಂದ ಹಾಗೂ ಕ್ಷೇತ್ರಗಳ ಸಮೀಕ್ಷೆಗಳನ್ನು ಪರಿಗಣಿಸಿ, ಬಿ ಫಾರ್ಮಗಳನ್ನು ನೀಡಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.
ಪ್ರತಿ ಕ್ಷೇತ್ರಕ್ಕೆ ಬೆಳಗಾವಿ ವಿಭಾಗದಿಂದ ಮೂರು ಜನರ ಆಕಾಂಕ್ಷಿಗಳ ಪಟ್ಟಿಯನ್ನು ಹೈಕಮಾಂಡ್ ಗೆ ನೀಡಲಿದೆ. ಕಾಂಗ್ರೆಸ್ ಪಕ್ಷದಿಂದ ಅತಿ ಹೆಚ್ಚು ಬೆಳಗಾವಿ 18 ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ಇದ್ದು, ಇಲ್ಲಿ ತಮ್ಮದೇ ಆದ ವೈಯಕ್ತಿಕ ವರ್ಚಸ್ಸು ಹಾಗೂ ಸಮುದಾಯಗಳ ಬೆಂಬಲಗಳನ್ನು ಪ್ರದೇಶಿಸಲು ಆಕಾಂಕ್ಷಿಗಳು ಸಜ್ಜಾಗಿವೆ.