spot_img
spot_img
spot_img
28.1 C
Belagavi
Thursday, September 29, 2022
spot_img

ದೇವಸ್ಥಾನದಿಂದ ವಾಪಸ್ಸಾಗುವಾಗ ಭೀಕರ ಅಪಘಾತ : ಐವರು ಸ್ಥಳದಲ್ಲೇ ಸಾವು

spot_img

ಕಲಬುರಗಿ: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಚಾಲಕ ಹಾಗೂ ನಾಲ್ವರು ಮಹಿಳೆಯರು ಸಾವಿಗೀಡಾಗಿರುವ ಘಟನೆ ಅಫಜಲಪುರ ತಾಲೂಕಿನ ಹೊರವಲಯದಲ್ಲಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಮಹಿಳೆಯರು ಸೇರಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನಕ್ಕೆ ಅಂಟಿಕೊಂಡಿದ್ದ ದೇಹಗಳನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.ಗಾಣಗಾಪುರದಿಂದ ಮಹಾರಾಷ್ಟ್ರ ಕಡೆ ಹೊರಟಿದ್ದ ಕಾರು ಮಾರ್ಗಮಧ್ಯೆ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಡ್ರೈವರ್ ಹಾಗೂ ನಾಲ್ವರು ಮಹಿಳೆಯರು ಸ್ಥಳದಲ್ಲೇ ಉಸಿರು ಬಿಟ್ಟಿದ್ದಾರೆ.

ಗಂಭೀರ ಗಾಯಗೊಂಡ ಇಬ್ಬರು ಬಾಲಕಿಯರು ಮತ್ತು 2 ವರ್ಷದ ಮಗುವನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ದೇವಲಗಾಣಗಾಪುರದ ದತ್ತಾತ್ರೇಯನ ದರ್ಶನ ಮಾಡಿಕೊಂಡು ವಾಪಸ್ ಹೋಗುತ್ತಿದ್ದರು ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ.

ಇನ್ನು ಭೀಕರ ಘಟನೆಗೆ ಕಾರು ಚಾಲಕನಿಗೆ ನಿದ್ರೆಗೆ ಜಾರಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮೃತರ ಬಗ್ಗೆ ಮಾಹಿತಿ ಲಭ್ಯ ಆಗಬೇಕಿದೆ. ಸ್ಥಳಕ್ಕೆ ಅಫಜಲಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

spot_img

Related News

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ರೈಡ್ ಮಾಡ್ತಾರೆ : ಡಿಕೆಶಿ 

ಬೆಂಗಳೂರು: ಈಗಾಗಲೇ ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -