ಬೆಳಗಾವಿ: ಬಸವರಾಜ ಹೊರಟ್ಟಿ ರಾಜೀನಾಮೆಯಿಂದಾಗಿ ತೆರವಾಗಿದ್ದ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಡಿಸೆಂಬರ್ 21ರಂದು ಚುನಾವಣೆ ಘೋಷಣೆಯಾಗಿದೆ. ಈ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ವಿಧಾನಪರಿಷತ್ ಸಭಾಪತಿ ಚುನಾವಣೆ ಸಂಬಂಧ, ಬಿಜೆಪಿ ಸದಸ್ಯರ ಸಭೆಯಲ್ಲಿ ಬಿಜೆಪಿ ಸದಸ್ಯರ ಸಭೆಯಲ್ಲಿ ಪರಿಷತ್ ಚುನಾವಣೆಗೆ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿಯನ್ನು ಆಯ್ಕೆ ಮಾಡಲಾಗಿದೆ.
ಹೀಗಾಗಿ ಅವರು ಇಂದು ಮಧ್ಯಾಹ್ನ ಬಿಜೆಪಿ ಮುಖಂಡರೊಂದಿಗೆ ತೆರಳಿ ಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರವನ್ನು ಸಲ್ಲಿಸಲಿದ್ದಾರೆ.