ಬಾಗಲಕೋಟೆ: ಜಿಲ್ಲೆಯಲ್ಲಿ ಒಟ್ಟು 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ. ಜಿಲ್ಲೆ ಬಾಗಲಕೋಟೆ, ಜಮಖಂಡಿ, ಬೀಳಗಿ, ತೇರದಾಳ, ಮುಧೋಳ, ಹುನಗುಂದ, ಬಾದಾಮಿ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ತೋಟಗಾರಿಕೆ ವಿವಿಯ ನೆಲಮಹಡಿಯಲ್ಲಿ ಮುಧೋಳ, ತೇರದಾಳ,ಜಮಖಂಡಿ ಮತ ಎಣಿಕೆ ನಡೆದರೇ, ಮೊದಲನೇ ಮಹಡಿಯಲ್ಲಿ ಬಾಗಲಕೋಟೆ, ಬೀಳಗಿ, ಹುನಗುಂದ, ಬಾದಾಮಿ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತದೆ.
7 ವಿಧಾನಸಭಾ ಕ್ಷೇತ್ರಗಳಿಗೆ ಪ್ರತ್ಯೇಕ ಭದ್ರತಾ ಕೊಠಡಿ, ಪ್ರತ್ಯೇಕ ಎಣಿಕೆ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆ ಕಾರ್ಯಕ್ಕೆ ಒಟ್ಟು 636 ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ಕ್ಷೇತ್ರದ ಎಣಿಕೆಗೆ 14 ಟೇಬಲ್ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್ಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬ ಎಣಿಕೆ ಸಹಾಯಕ, ಒಬ್ಬ ಮೈಕ್ರೊ ಅಬ್ಸರ್ವರ್ ನೇಮಕ ಮಾಡಲಾಗಿದೆ.