spot_img
spot_img
spot_img
21.1 C
Belagavi
Friday, September 30, 2022
spot_img

ವರ್ಷದ ಮೊದಲ ಚಂಡಮಾರುತ ಅಸನಿ ಆರ್ಭಟ :ರಾಜ್ಯದಲ್ಲಿ ಮೂರು ದಿನ ಮಳೆ

spot_img

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮಾರ್ಚ್ 21ರಂದು ಅಸನಿ ಎಂಬ ವರ್ಷದ ಮೊದಲ ಚಂಡಮಾರುತ ಬೀಸಲಿದೆ. ಚಂಡಮಾರುತದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳ ಉದ್ದಕ್ಕೂ ಅಸನಿ ಚಂಡಮಾರುತ ಬೀಸಲಿದ್ದು, ಗಂಟೆಗೆ 70-90 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತವಾಗಿ ಬದಲಾವಣೆಯಾಗುತ್ತಿದ್ದು, ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ನಾಳೆ ಹಾಗೂ ನಾಡಿದ್ದು ಕರಾವಳಿ ಭಾಗದ ಜಿಲ್ಲೆಗಳಲ್ಲಿ, ಕಲಬುರ್ಗಿ, ಯಾದಗಿರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇಂದು ಹಾಗೂ ನಾಳೆ ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

spot_img

Related News

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

ಕೊಲೆಯಾದ ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ನೌಕರಿ 

ಬೆಂಗಳೂರು : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -