Ad imageAd image

ಎಪಿಎಲ್‌ ಕಾರ್ಡುಗಳ ರದ್ಧತಿಗೆ ಆಹಾರ ಇಲಾಖೆಯು ನಿರ್ದೇಶನ ನೀಡಿಲ್ಲ

ratnakar
ಎಪಿಎಲ್‌ ಕಾರ್ಡುಗಳ ರದ್ಧತಿಗೆ ಆಹಾರ ಇಲಾಖೆಯು ನಿರ್ದೇಶನ ನೀಡಿಲ್ಲ
WhatsApp Group Join Now
Telegram Group Join Now

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಎಪಿಎಲ್ ಕಾರ್ಡುಗಳ ರದ್ದತಿಗೆ ಯಾವುದೇ ಸೂಚನೆ ನೀಡಿಲ್ಲ ಮತ್ತು ಈವರೆಗೆ ಯಾವುದೇ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಿಲ್ಲ.

ಕೆಲವು ದಿನಪತ್ರಿಕೆಗಳಲ್ಲಿ ಇ – ಕೆವೈಸಿ ನೋಂದಣಿ ಮಾಡಿಕೊಳ್ಳದ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ ಎಂದು ವರದಿಯಾಗಿರುವುದು ಸತ್ಯಕ್ಕೆ ದೂರವಾಗಿದೆ.

ರಾಜ್ಯದಲ್ಲಿ 2024ರ ಸೆಪ್ಟೆಂಬರ್ 2ರ ವರೆಗೆ 25,13,798 ಎಪಿಎಲ್ ಕಾರ್ಡುಗಳಿದ್ದವು. ನವೆಂಬರ್ 16 ರಂದು 25,62,566* ಕಾರ್ಡುಗಳಿವೆ. ಅನರ್ಹ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸುವ ಕಾರ್ಯ ಕೈಗೊಂಡ ಪರಿಣಾಮ ಕೆಲವು ಬಿಪಿಎಲ್ ಕಾರ್ಡುಗಳನ್ನು ಎಪಿಎಲ್ ಕಾರ್ಡುಗಳಾಗಿ ಪರಿವರ್ತಿಸಿರುವುದರಿಂದ 48,768 ಕಾರ್ಡುಗಳು ಹೆಚ್ಚಳವಾಗಿವೆ.

ರಾಜ್ಯದಲ್ಲಿ 22 ಲಕ್ಷ ಬಿಪಿಎಲ್ ಕಾರ್ಡುಗಳು ರದ್ದಾಗಿವೆ ಎಂದು ಸುದ್ದಿ ಪ್ರಕಟವಾಗಿರುವುದು ಸತ್ಯಕ್ಕೆ ದೂರವಾಗಿದ್ದು, ಈ ರೀತಿಯ ಕ್ರಮವನ್ನು ಈವರೆಗೆ ಕೈಗೊಂಡಿರುವುದಿಲ್ಲ ಎಂದು ಈ ಮೂಲಕ ಸ್ಪಷ್ಟೀಕರಿಸುತ್ತಿದ್ದೇವೆ.

WhatsApp Group Join Now
Telegram Group Join Now
Share This Article